ಮುಂಬೈ:ಬಾಲಿವುಡ್​​ ನಟ ಸಲ್ಮಾನ್ ಖಾನ್ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಾಲಿವುಡ್ ಸೂಪರ್‌ಸ್ಟಾರ್‌ಗೆ ಇತ್ತೀಚೆಗೆ ಹಲವಾರು ಬೆದರಿಕೆಗಳು ಬಂದಿವೆ. ಇದೀಗ ಈ ನಟನಿಗೆ ಮತ್ತೊಂದು ಕೊಲೆ ಬೆದರಿಕೆ ಬಂದಿದೆ ಎಂದು ತಿಳಿದು ಬಂದಿದೆ.
ನಟ ಸಲ್ಮಾನ್ ಖಾನ್​ಗೆ ಮತ್ತೊಮ್ಮೆ ಕೊಲೆ ಬೆದರಿಕೆ ಕರೆ ಬಂದಿದೆ. ಕರೆ ಮಾಡಿದವರು 2023 ಏಪ್ರಿಲ್ 30 ರಂದು ನಟನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನಿನ್ನೆ (ಏಪ್ರಿಲ್ 10) ರಂದು ರಾತ್ರಿ 9 ಗಂಟೆಗೆ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಬಂದಿತ್ತು.
ಕರೆ ಮಾಡಿದವರನ್ನು ಗೌರಕ್ಷಕ್ ರಾಕಿ ಭಾಯ್ ಎಂದು ಗುರುತಿಸಿರುವ ಪೊಲೀಸರು, ಈತ ಜೋಧ್‌ಪುರದ ನಿವಾಸಿಯಾಗಿದ್ದಾನೆ. ಈತ ಸಲ್ಮಾನ್​​ ಖಾನ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕುರಿತಾಗಿ ಮುಂಬೈ ಪೊಲೀಸರು ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಈ ಹಿಂದೆ ಸಲ್ಮಾನ್‌ಗೆ ಮೇಲ್ ಮೂಲಕ ಕೊಲೆ ಬೆದರಿಕೆ ಬಂದಿತ್ತು:
ಈ ಹಿಂದೆ ನಟನಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಬಂದಿತ್ತು. ನಂತರ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಅಲ್ಲದೆ, ಸೂಪರ್‌ಸ್ಟಾರ್‌ನ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಇದನ್ನೂ ಓದಿ:5 ಗ್ರಾಂ ಚಿನ್ನದ ಝರಿ ನೇಯ್ಗೆ ಇರುವ ಸೀರೆಯನ್ನು ದೇವರಿಗೆ ಅರ್ಪಿಸಿದ ಭಕ್ತ!
ನಿರಂತರವಾಗಿ ಜೀವ ಬೆದರಿಕೆಯಿಂದಾಗಿ ಸಲ್ಮಾನ್ ಖಾನ್ ಹೊಸ ಬುಲೆಟ್ ಪ್ರೂಫ್ ವಾಹನವನ್ನೂ ಖರೀದಿಸಿದ್ದಾರೆ. ಅವರು ಇತ್ತೀಚೆಗೆ ಹೊಸ ನಿಸ್ಸಾನ್ ಪೆಟ್ರೋಲ್ ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ. ಪ್ರಸ್ತುತ, ಉಲ್ಲೇಖಿಸಲಾದ ವಾಹನವನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿಲ್ಲ ಆದರೆ ಅವರ ಭದ್ರತೆಯ ದೃಷ್ಟಿಯಿಂದ, ನಟ ದಕ್ಷಿಣ ಏಷ್ಯಾ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಮತ್ತು ದುಬಾರಿ ವಾಹನಗಳನ್ನು ಆಮದು ಮಾಡಿಕೊಂಡಿದ್ದಾರೆ.
ಹವಾಮಾನ ಮುನ್ಸೂಚನೆ; ಏ.15ರಿಂದ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
