ನವದೆಹಲಿ:ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಶೋಷಣೆ ನೀಡಿದ ಪ್ರಕರಣದಲ್ಲಿ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್​ಐ) ಅಧ್ಯಕ್ಷ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ವೇಳೆ ಪಾನಮತ್ತ ಪೊಲೀಸರು ಬುಧವಾರ ತಡರಾತ್ರಿ ಕುಸ್ತಿಪಟುಗಳ ಮೇಲೆ ಹಲ್ಲೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.
ಪ್ರತಿಭಟನಾ ಸ್ಥಳಕ್ಕೆ ತಮ್ಮ ಮಡಚಿದ ಹಾಸಿಗೆಗಳನ್ನು ತರಲು ಯತ್ನಿಸಿದಾಗ ಪೊಲೀಸರು ಹಲ್ಲೆ ನಡೆಸಿದರು ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಅನೇಕ ಕುಸ್ತಿಪಟುಗಳ ತಲೆಗೆ ಏಟು ಬಿದ್ದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ಕುಸ್ತಿಪಟು ಪ್ರಜ್ಞೆ ತಪ್ಪಿ ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಬಟ್ಟೆ ಬಿಚ್ಚಿಸಿ ಚೆಕಿಂಗ್ ಮಾಡಿದ ವಾರ್ಡನ್! ಪರ್ಸಲ್ಲಿ ಹಣ ಮಿಸ್ ಆದದ್ದಕ್ಕೆ ವಿದ್ಯಾರ್ಥಿನಿಯರ ಮೇಲೇ ಅನುಮಾನ…
ಪೊಲೀಸರ ಪ್ರಕಾರ, ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಸೋಮನಾಥ್ ಭಾರ್ತಿ ಅವರು ಅನುಮತಿಯಿಲ್ಲದೆ ಮಡಿಸು ಹಾಸಿಗೆಗಳೊಂದಿಗೆ ಪ್ರತಿಭಟನಾ ಸ್ಥಳಕ್ಕೆ ತಲುಪಿದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿದಾಗ, ಸಣ್ಣ ವಾಗ್ವಾದ ನಡೆಯಿತು. ನಂತರ ಎಎಪಿ ನಾಯಕ ಮತ್ತು ಇತರೆ ಇಬ್ಬರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದು, ಹಲ್ಲೆ ಆರೋಪವನ್ನು ತಳ್ಳಿ ಹಾಕಿದ್ದಾರೆ.
ಮದ್ಯದ ಅಮಲಿನಲ್ಲಿ ಪೊಲೀಸರು ನಮ್ಮ ಮೇಲೆ ಹಲ್ಲೆ ಮಾಡಿದರೆಂದು ಕೆಲ ಕುಸ್ತಿಪಟುಗಳು ಆರೋಪ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮದ್ಯದ ಅಮಲಿನಲ್ಲಿದ್ದ ಪೇದೆ ಧರೆಮೇಂದ್ರ ಎಂಬುವರು ವಿನೇಶ್ ಫೋಗಟ್ ಅವರನ್ನು ನಿಂದಿಸಿ ನಮ್ಮೊಂದಿಗೆ ಜಗಳವಾಡಿದರು ಎಂದು ಮಾಜಿ ಕುಸ್ತಿಪಟು ರಾಜ್‌ವೀರ್ ಹೇಳಿದರು. ಒಲಿಂಪಿಯನ್ ಮತ್ತು ಕಾಮನ್​ವೆಲ್ತ್​ ಗೇಮ್ಸ್ ಚಿನ್ನದ ಪದಕ ವಿಜೇತೆ ಗೀತಾ ಫೋಗಟ್ ಅವರು ತಮ್ಮ ಕಿರಿಯ ಸಹೋದರ ದುಶ್ಯಂತ್ ಫೋಗಟ್ ಅವರ ತಲೆಗೆ ಏಟು ಬಿದ್ದಿದೆ ಎಂದು ಹೇಳಿದ್ದಾರೆ.
ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಏಷ್ಯನ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್​, ನಾವೇನು ಈ ರೀತಿಯಲ್ಲಿ ನಡೆಸಿಕೊಳ್ಳಬೇಕಾದಂತಹ ಅಪರಾಧಿಗಳಲ್ಲ ಎಂದರು. ಅಲ್ಲದೆ, ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ನಮ್ಮನ್ನು ಕೊಂದು ಬಿಡಿ ಎಂದು ವಿನೇಶ್​ ಫೋಗಟ್ ಅಳುತ್ತಾ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.
ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಅವರು ಮಾತನಾಡುತ್ತಾ, ನಾನು ಗೆದ್ದ ಎಲ್ಲ ಪದಕಗಳನ್ನು ಸರ್ಕಾರವು ಹಿಂದಕ್ಕೆ ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ ಎಂದರು.
ಇದನ್ನೂ ಓದಿ:ಜಾಮೀನು ಕೊಡದ ಜಡ್ಜ್​ಗೆ ಸುಪ್ರೀಂ ಕೋರ್ಟ್ ಶಿಕ್ಷೆ; ಕೋರ್ಟ್ ಕಾರ್ಯದಿಂದ ಬಿಡುಗಡೆ ಮಾಡಿ ನ್ಯಾಯಾಂಗ ಅಕಾಡೆಮಿಗೆ ವರ್ಗ
ಘರ್ಷಣೆಯ ನಂತರ, ಪ್ರತಿಭಟನಾ ಸ್ಥಳದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಮತ್ತು ಇಡೀ ಪ್ರದೇಶವನ್ನು ಬ್ಯಾರಿಕೇಡ್​ಗಳಿಂದ ನಿರ್ಬಂಧಿಸಲಾಗಿದೆ. ಪ್ರತಿಭಟನಾ ನಿರತ ಕುಸ್ತಿಪಟುಗಳ ಬಳಿಗೆ ಮಾಧ್ಯಮದ ಸಿಬ್ಬಂದಿಗೆ ತೆರಳಲು ಅವಕಾಶ ಸಹ ನೀಡಿಲ್ಲ. ತಡರಾತ್ರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡ ದೀಪೇಂದರ್ ಸಿಂಗ್ ಹೂಡಾ, ದೆಹಲಿ ಪೊಲೀಸರು ತನ್ನನ್ನು ಬಂಧಿಸಿ ವಸಂತ ವಿಹಾರ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಿದ್ದಾರೆ.
ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಭಾರತದ ಅಗ್ರ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆರು ಬಾರಿ ಸಂಸದರಾಗಿರುವ ಭೂಷಣ್​ ಸಿಂಗ್​, ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಸಿಂಗ್ ವಿರುದ್ಧ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯನ್ನು ಭಾರತದ ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಲಿದೆ.(ಏಜೆನ್ಸೀಸ್​)
ಬ್ರಿಜ್​ ವಿರುದ್ಧ ಮುಂದುವರಿದ ಧರಣಿ: ಭಾರತೀಯ ಒಲಿಂಪಿಕ್​ ಅಸೋಸಿಯೇಷನ್ ಮುಂದೆ 4 ಬೇಡಿಕೆಯಿಟ್ಟ ಕುಸ್ತಿಪಟುಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
