ನವದೆಹಲಿ:ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್​ಐ)ದ ಅಧ್ಯಕ್ಷ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್​ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್​ ಅವರು ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ.
ಮುಂಚೂಣಿ ಕುಸ್ತಿಪಟುಗಳಿಗೆ ಸಚಿವ ಅನುರಾಗ್​ ಠಾಕೂರ್​ ಅವರು ತಡರಾತ್ರಿ ಆಹ್ವಾನವನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಕುಸ್ತಿಪಟುಗಳು ಭೇಟಿ ನೀಡಿದ್ದಾರೆ. ಕುಸ್ತಿಪಟುಗಳಿಗೆ ರೈತ ನಾಯಕ ರಾಕೇಶ್​ ಟಿಕಾಯತ್​ ಅವರು ಕೂಡ ಸಾಥ್​ ನೀಡಿದ್ದಾರೆ. ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಈ ಬಗ್ಗೆ ತಡರಾತ್ರಿ ಟ್ವೀಟ್​ ಮಾಡಿದ್ದ ಅನುರಾಗ್​ ಠಾಕೂರ್​, ಕುಸ್ತಿಪಟುಗಳ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ಅದಕ್ಕಾಗಿ ನಾನು ಮತ್ತೊಮ್ಮೆ ಕುಸ್ತಿಪಟುಗಳನ್ನು ಆಹ್ವಾನಿಸಿದ್ದೇನೆ ಎಂದಿದ್ದರು.
The government is willing to have a discussion with the wrestlers on their issues.
I have once again invited the wrestlers for the same.
— Anurag Thakur (@ianuragthakur)June 6, 2023

ಕಳೆದ ಶನಿವಾರ ಕುಸ್ತಿಪಟುಗಳು ಗೃಹ ಸಚಿವ ಅಮಿತ್​ ಷಾ ಅವರನ್ನು ಭೇಟಿ ಮಾಡಿ ಬ್ರಿಜ್​ ಭೂಷಣ್​ ಲೈಂಗಿಕ ದೌರ್ಜನ್ಯದ ವಿರುದ್ಧ ಚರ್ಚಿಸಿದ್ದರು. ಇದಾದ ಬಳಿಕ ಭಜರಂಗ್​ ಪೂನಿಯಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ಪ್ರತಿಭಟನಾ ಚಳುವಳಿಯು ಇನ್ನೂ ನಿಂತಿಲ್ಲ. ಅದು ಮುಂದುವರಿದಿದೆ. ಅದನ್ನು ಹೇಗೆ ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಬೇಕೆಂದು ಚರ್ಚಿಸುತ್ತಿದ್ದೇವೆ. ಬ್ರಿಜ್​ ಸಿಂಗ್​ ವಿರುದ್ಧದ ತನಿಖೆಯು ಪ್ರಗತಿಯಲ್ಲಿದೆ ಎಂದು ಅಮಿತ್​ ಷಾ ಅವರು ಹೇಳಿದ್ದಾರೆ. ಸರ್ಕಾರದ ಪ್ರತಿಕ್ರಿಯೆಯು ನಮಗೆ ತೃಪ್ತಿದಾಯಕವಾಗಿಲ್ಲ ಮತ್ತು ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಂಡಿಲ್ಲ ಎಂದು ಹೇಳಿದ್ದಾರೆ.
ಅಂದಹಾಗೆ ಅಮಿತ್​ ಷಾ ಅವರು ಭಜರಂಗ್​ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯನ್ ಅವರ ಜತೆ ಶನಿವಾರ ರಾತ್ರಿ 11 ಗಂಟೆಗೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬ್ರಿಜ್​ ಭೂಷಣ್​ ವಿರುದ್ಧ ಶೀಘ್ರ ತನಿಖೆ ಮತ್ತೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ಬ್ರಿಜ್​ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಹಲವರನ್ನು ವಿಚಾರಣೆ ನಡೆಸಿದ್ದಾರೆ. ಕುಸ್ತಿ ಒಕ್ಕೂಟದ ಮೂರರಿಂದ ನಾಲ್ಕು ಸದಸ್ಯರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಮತ್ತು ಸಿಂಗ್ ಅವರ ದೆಹಲಿ ನಿವಾಸದಲ್ಲಿ ಕೆಲವು ಸಿಬ್ಬಂದಿಯನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.(ಏಜೆನ್ಸೀಸ್​)
ಆದಿಪುರುಷ್​​ ಚಿತ್ರದ ಅಂತಿಮ ಟ್ರೇಲರ್ ಬಿಡುಗಡೆ: ಯುದ್ಧಭೂಮಿಯ ಅನಾವರಣ

ಇನ್ನೂ ನಾಲ್ಕು ದಿನ ಮೀನುಗಾರರು ಸಮುದ್ರಕ್ಕೆ ಇಳಿಯದಿರಿ! ಹವಾಮಾನ ಇಲಾಖೆ ಮುನ್ಸೂಚನೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
