ದೆಹಲಿ:ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್​ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಮಾಡಿದ್ದು, ಸಿಂಗ್​ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೆಹಲಿಯಲ್ಲಿ ಕಳೆದ ಹಲವು ದಿನಗಳಿಂದ ಅನೇಕ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರದ​ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ: ಎಚ್​ಡಿಕೆ
ಸರ್ಕಾರವು ಸಿಂಗ್​ ವಿರುದ್ದ ಕ್ರಮ ಜರುಗಿಸಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಮತ್ತು ನ್ಯಾಯ ದೊರಕಿಸದ ಕಾರಣದಿಂದ ಬೇಸತ್ತಿದ್ದು ತಮಗೆ ಬಂದಿರುವ ಪದಕಗಳನ್ನು ಸಂಜೆ 6 ಗಂಟೆಗೆ ಹರಿದ್ವಾರದ ಬಳಿ ಗಂಗಾ ನದಿಗೆ ಎಸೆಯುವುದಾಗಿ ಹೇಳಿದ್ದಾರೆ. ಅಲ್ಲದೇ, ಇಂಡಿಯಾ ಗೇಟ್‌ನಲ್ಲಿ ಆಮರಣಾಂತ ಉಪವಾಸ ಮಾಡುವುದಾಗಿ ತಿಳಿಸಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಹಲವು ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದರು. ಮೊನ್ನೆ ನೂತನ ಸಂಸತ್ ಭವನದತ್ತ ತೆರಳಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡು ಬಿಡುಗಡೆ ಮಾಡಿದ್ದರು.
ನಮಗೆ ಮಾನಸಿಕ ಹಾಗೂ ದೈಹಿಕವಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಕುಸ್ತಿಪಟುಗಳು, ಸಿಂಗ್​ ವಿರುದ್ಧ ಆರೋಪಿಸಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
