ಮುಂಬೈ:ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆ ಮುಂಬೈ-ನಾಗ್ಪುರ ಎಕ್ಸ್​ಪ್ರೆಸ್​ ವೇನಲ್ಲಿ ನಡೆದಿದೆ. ಔರಂಗಬಾದ್​ ಜಿಲ್ಲೆಯ ಜಾಲ್ನಾದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಶುಕ್ರವಾರ ರಾತ್ರಿ 11ರ ಸುಮಾರಿಗೆ ಸ್ವಿಫ್ಟ್​​ ಕಾರೊಂದು ಟ್ಯಾಂಕ್​ ಭರ್ತಿ ಮಾಡಿಸಿಕೊಂಡ ಬಳಿಕ ರಾಂಗ್​ವೇನಲ್ಲಿ ಹೈವೇ ಪ್ರವೇಶಿಸಲು ಚಾಲಕ ಮುಂದಾಗಿದ್ದಾನೆ. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಎರ್ಟಿಗಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಮೃತದೇಹಗಳನ್ನು ಶವಾಗಾರಕ್ಕೆ ಸಾಗಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತ ಎಷ್ಟು ತೀವ್ರವಾಗಿತ್ತೆಂದರೆ, ಎರ್ಟಿಗಾ ಕಾರು ಗಾಳಿಗೆ ಹಾರಿ ಹೆದ್ದಾರಿಯ ಬ್ಯಾರಿಕೇಡ್‌ ಮೇಲೆ ಬಿದ್ದಿತು. ಕಾರಿನಲ್ಲಿದ್ದವರು ರಸ್ತೆ ಮೇಲೆ ಬಿದ್ದರು. ಮತ್ತೊಂದು ಕಾರು ಡಿಕ್ಕಿ ರಭಸಕ್ಕೆ ಅಪ್ಪಚ್ಚಿಯಾಗಿತ್ತು. ಅಪಘಾತದ ಭೀಕರತೆಗೆ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಕ್ತಸಿಕ್ತ ಮೃತದೇಹಗಳು ಹೆದ್ದಾರಿಯಲ್ಲಿ ಬಿದ್ದಿರುವ ದೃಶ್ಯ ವೈರಲ್‌ ಆಗಿದೆ.
Car Enters#Mumbai–#Nagpur#ExpresswayFrom Wrong Side, 6 Dead In Horrific Crash. The accident happened around 11 pm near Kadwanchi village in#Jalnadist when a Swift Dzire entered the highway from wrong side after refuelling & rammed an Ertiga going to Mumbai from Nagpur.pic.twitter.com/BwirV4QNMe
#Maharashtra: Six people killed and 4 injured in a collision between two cars on the Mumbai-Nagpur Expressway near Kadwanchi village on#SamruddhiHighwayin Jalna district.pic.twitter.com/YkzJfDzUPL
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
