ಬೆಂಗಳೂರು:ಕ್ರಿಕೆಟ್ ದೇವರು ಎಂದೇ ಖ್ಯಾತರಾಗಿರುವ ಸಚಿನ್ ತೆಂಡುಲ್ಕರ್ ಅವರ ಪುತ್ರಿ ಸಾರಾ ತೆಂಡುಲ್ಕರ್ ಕೂಡ ಇತ್ತೀಚೆಗೆ ಭಾರಿ ಸುದ್ದಿಯಲ್ಲಿದ್ದಾರೆ. ಅದರಲ್ಲೂ ಈ ವಿಶ್ವಕಪ್ ಪಂದ್ಯಾವಳಿ ಸಂದರ್ಭದಲ್ಲಿ ಅವರ ಕುರಿತು ಹಲವು ಸುದ್ದಿಗಳು ಹರಿದಾಡಿದ್ದವು.
ದೇಶಾದ್ಯಂತ ಇತ್ತೀಚೆಗೆ ಡೀಪ್​ಫೇಕ್​ ಫೋಟೋ/ವಿಡಿಯೋ ಪ್ರಕರಣಗಳು ಹೆಚ್ಚಾಗಿದ್ದು, ಸೋಷಿಯಲ್ ಮೀಡಿಯಾ ಬಳಕೆದಾರರಲ್ಲಿ ಇದು ಆತಂಕಕಾಗಿ ಸಂಗತಿಯಾಗಿ ಪರಿಣಮಿಸಿದೆ. ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವರ ಡೀಪ್​ಫೇಕ್ ಫೋಟೋ/ವಿಡಿಯೋಗಳು ಇತ್ತೀಚೆಗೆ ಹರಿದಾಡಿದ್ದವು.
ಇದನ್ನೂ ಓದಿ:ಎಂ. ಚಿನ್ನಸ್ವಾಮಿ ಸ್ಟೇಡಿಯಂ ಎಲ್ಲರಿಗೂ ಗೊತ್ತು: ಆದರೆ ಈ ಕ್ರೀಡಾಂಗಣಕ್ಕೆ ಯಾಕೆ ಆ ಹೆಸರು ಬಂತು?
ಇದೀಗ ತಮ್ಮ ಫೋಟೋ ಕೂಡ ಡೀಪ್​ಫೇಕ್ ಆಗಿವೆ ಎಂದು ಆ ಕುರಿತು ಮಾಹಿತಿ ಹಂಚಿಕೊಂಡಿರುವ ತೆಂಡುಲ್ಕರ್ ಪುತ್ರಿ ಸಾರಾ, ‘ಎಕ್ಸ್’​ ವಿಚಾರವಾಗಿ ಇನ್ನೊಂದು ಮಹತ್ವದ ಸಂಗತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ: ಕಪ್ ಗೆದ್ದ ಕ್ರಿಕೆಟ್ ತಂಡದ ಹಿಂದಿರುವ ಕರಾವಳಿ ಮಹಿಳೆ ಯಾರು?
ಎಕ್ಸ್​ನಲ್ಲಿ ಅರ್ಥಾತ್ ಹಳೆಯ ಟ್ವಿಟರ್​ನಲ್ಲಿ ನನ್ನ ಹೆಸರಿನ ಕೆಲವು ಖಾತೆಗಳನ್ನು ಸೃಷ್ಟಿಸಿ ಜನರನ್ನು ದಾರಿ ತಪ್ಪಿಸಲಾಗುತ್ತದೆ. ನಾನು ಎಕ್ಸ್​ನಲ್ಲಿ ಯಾವುದೇ ಖಾತೆಯನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿರುವ ಸಾರಾ, ಎಕ್ಸ್​ ಆ್ಯಪ್​ನವರು ಈ ನಕಲಿ ಖಾತೆಗಳ ಕುರಿತು ಸೂಕ್ತ ಕ್ರಮಕೈಗೊಳ್ಳಲಿ ಎಂಬ ಆಶಯವನ್ನೂ ವ್ಯಕ್ತಪಡಿಸಿದ್ದಾರೆ. ಸಾರಾ ತೆಂಡುಲ್ಕರ್​ ಹೆಸರಿನಲ್ಲಿ ಹಲವು ಎಕ್ಸ್​ ಖಾತೆಗಳಿದ್ದು, ಈ ಮೂಲಕ ಸಾರಾಸಗಟಾಗಿ ಈಕೆ ಆ ಎಲ್ಲ ಖಾತೆಗಳನ್ನು ತಮ್ಮದಲ್ಲವೆಂದು ಹೇಳಿದ್ದಾರೆ.

‘ನಂಗೆ ಕನ್ನಡ ತುಂಬಾ ಇಷ್ಟ..’ ಎಂದು ಕ್ರಿಕೆಟಿಗ ಕಪಿಲ್​ದೇವ್ ಅವರಿಂದ ಹೇಳಿಸಿದ್ರು ಕನ್ನಡದ ನಟಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 7 =
Remember me
