ನವದೆಹಲಿ:ಕಳೆದ ಕೆಲವು ದಿನಗಳಿಂದ ಉತ್ತರ ಭಾರತದ ಹಲವು ಕಡೆ ಮಳೆರಾಯ ಆರ್ಭಟಿಸುತ್ತಿದ್ದು, ಯಮುನೆಯ ರುದ್ರನರ್ತನಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿ ಹೋಗಿದೆ. ನಗರದ ಬಹುತೇಕ ಭಾಗ ಜಲಾವೃತಗೊಂಡಿದ್ದು, ನೀರು ಸುಪ್ರೀಂ ಕೋರ್ಟ್​ವರೆಗೂ ತಲುಪಿದೆ.
ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೇನೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF) ಸಹಾಯ ಪಡೆಯುವಂತೆ ಸೂಚಿಸಿದ್ದಾರೆ.
#WATCH| Delhi CM Arvind Kejriwal inspects the spot at Vikas Bhawan, ITO where a drain regulator is damaged.Delhi Ministers Atishi and Saurabh Bharadwaj also present.pic.twitter.com/Qj7YDNEhke
ಇದನ್ನೂ ಓದಿ:ರಾಜ್ಯದಲ್ಲಿ ಮತ್ತೆ ಮಳೆ ಬಿರುಸು; ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ದೆಹಲಿಯ ಕೆಲವು ಪ್ರದೇಶದಲ್ಲಿ ನೀರು ಕಡಿಮೆಯಾಗಲು ಶುರುವಾದ ನಂತರ ವಿಕಾಸ್​ ಭವನದ ಬಳಿ ಇರುವ ಡ್ರೈನ್​ ರೆಗ್ಯುಲೇಟರ್​ ಕೆಟ್ಟು ಹೋದ ಕಾರಣ ITO ಹಾಗೂ ರಾಜ್​ಘಾಟ್​ ಪ್ರದೇಶಗಳ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಸುಮಾರು ಘಂಟೆಗಳ ಕಾಲ ಪರದಾಡಿದರು.
ತೀವ್ರ ಮಳೆಯಿಂದಾಗಿ ನಗರದಲ್ಲಿರುವ ನೀರು ಸಂಸ್ಕರಣಾ ಘಟಕಗಳು ಕೆಟ್ಟು ಹೋಗಿದ್ದು, ಕುಡಿಯುವ ನೀರಿಗೂ ಜನ ಪರದಾಡುವಂತಾಗಿದೆ. ಪ್ರವಾಹದ ನೀರು ತಿಲಕ್​ ಮಾರ್ಗದಲ್ಲಿರುವ ಸುಪ್ರೀಂ ಕೋರ್ಟ್​ವರೆಗೂ ತಲುಪಿದ್ದು ಆದಷ್ಟು ಬೇಗ ಸಮಸ್ಯೆ ಬಗೆಹರಿಸುವಂತೆ ಸಿಎಂ ಅಧಿಕಾರಿಗಳಿದ ಸೂಚಿಸಿದ್ದಾರೆ.
#WATCH| Delhi Lt Governor VK Saxena and Minister Atishi & Saurabh Bharadwaj inspect the spot at Vikas Bhawan, ITO where a drain regulator is damaged.pic.twitter.com/qPBJIOAM4N
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
