ಮುಂಬೈ:ಯೆಸ್​ ಬ್ಯಾಂಕ್​ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸಂಸ್ಥಾಪಕ ರಾಣಾ ಕಪೂರ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಶುಕ್ರವಾರ ದಾಳಿ ಮಾಡಿ, ಶೋಧ ಕಾರ್ಯ ನಡೆಸಿತು. ಕಪೂರ್​ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಆರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಪೂರ್​ ವಿರುದ್ಧ ಈಗಾಗಲೇ ಲುಕ್ ಔಟ್ ನೋಟಿಸ್​ ಕೂಡ ಜಾರಿ ಮಾಡಲಾಗಿದೆ. ಅಲ್ಲದೆ, ಯೆಸ್​ ಬ್ಯಾಂಕ್​ನ ಮಾಜಿ ನಿರ್ದೇಶಕರು ದೇಶ ತೊರೆಯದಂತೆ ಮುಂಜಾಗ್ರತ ಕ್ರಮವನ್ನು ವಹಿಸಲಾಗಿದೆ.
ಬ್ಯಾಂಕ್​ ನಿರ್ವಹಣೆಯ ಪುನರ್ರಚನೆಗೆ ಕಾರಣವಾದ ಬ್ಯಾಂಕಿನ ಉನ್ನತ ಅಧಿಕಾರಿಗಳಿಂದ ನಡೆದಿರುವ ಕರ್ತವ್ಯ ಲೋಪವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಪಟ್ಟಿ ಮಾಡಿದ ದಿನದಂದೇ ಈ ಕ್ರಮವನ್ನೂ ತೆಗೆದುಕೊಳ್ಳಲಾಗಿದೆ.
ಅಂದಹಾಗೆ ಕಪೂರ್​ ಯೆಸ್​ ಬ್ಯಾಂಕ್​ ಆರಂಭವಾದ 2004ರಿಂದಲೂ ಸಿಇಒ ಆಗಿದ್ದರು. ತನ್ನ ಅವಧಿಯನ್ನು ವಿಸ್ತರಣೆ ಮಾಡುವಂತೆ ಕೋರಿದ್ದ ಮನವಿಯನ್ನು ಆರ್​ಬಿಐ ನಿರಾಕರಿಸಿದ ಬಳಿಕ 2018ರ ಸೆಪ್ಟೆಂಬರ್​​ನಲ್ಲಿ ಸಿಇಒ ಸ್ಥಾನದಿಂದ ಕೆಳಗೆ ಇಳಿದಿದ್ದರು.
ಸುಸ್ಥಿ ಸಾಲಗಳಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಯೆಸ್​ ಬ್ಯಾಂಕ್​ ಅನ್ನು ಭಾರತೀಯ ರಿಸರ್ವ್​ ಬ್ಯಾಂಕ್​(ಆರ್​ಬಿಐ) ತನ್ನ ಸುಪರ್ದಿಗೆ ತೆಗೆದುಕೊಂಡು, ಬ್ಯಾಂಕ್​ ಆಡಳಿತ ಮಂಡಳಿಯನ್ನು ಸೂಪರ್​ ಸೀಡ್​ ಆಗಿ ಮಾಡಿದೆ. ನಗದು ವಿತ್​ಡ್ರಾ ಮಿತಿಯನ್ನು 50 ಸಾವಿರಕ್ಕೆ ನಿಗದಿಗೊಳಿಸಲಾಗಿದ್ದು, ಸಾವಿರಾರು ಗ್ರಾಹಕರು ಹಣ ತೆಗದುಕೊಳ್ಳಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇತ್ತ ಷೇರು ಮಾರುಕಟ್ಟೆಯಲ್ಲೂ ಯೆಸ್​ ಬ್ಯಾಂಕ್​ ಪಾಲು ತೀವ್ರ ಕುಸಿತ ಕಂಡಿದೆ.(ಏಜೆನ್ಸೀಸ್​)
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:nineteen − seventeen =
Remember me
