ಹೈದರಾಬಾದ್​:ನಿನ್ನೆಯಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನು ಹಾಡಹಗಲೇ ದುಷ್ಕರ್ಮಿಗಳು ಅಪಹರಿಸಿರುವ ಘಟನೆ ತೆಲಂಗಾಣದ ರಾಜಣ್ಣ ಸಿರ್ಸಿಲ್ಲ ಜಿಲ್ಲೆಯ ಚಂದುರ್ಥಿ ಮಂಡಲದ ಮೂಡಪಲ್ಲಿಯಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.
ಯುವತಿ ಶಾಲಿನಿ ಮತ್ತು ಆಕೆಯ ತಂದೆ ಚಂದ್ರಯ್ಯ ಇಬ್ಬರು ಹನುಮಂತನ ದೇವಸ್ಥಾನಕ್ಕೆ ಹೋಗಿದ್ದರು. ದೇವರ ದರ್ಶನ ಮುಗಿಸಿ ಬರುವಾಗ ಅಲ್ಲಿಯೇ ಇದ್ದ ನಾಲ್ವರು ಚಂದ್ರಯ್ಯನ ಮೇಲೆ ಹಲ್ಲೆ ಮಾಡಿ, ಶಾಲಿನಿಯನ್ನು ಕಾರಿನೊಳಗೆ ಎಳೆದುಕೊಂಡು ಅಪಹರಿಸಿದ್ದಾರೆ. ನಾಲ್ವರು ಕೂಡ ಪಾನಮತ್ತರಾಗಿದ್ದರು. ಇಡೀ ದೃಶ್ಯ ದೇವಸ್ಥಾನದ ಆವರಣದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಪಹರಣಕ್ಕೆ ಒಳಗಾದ ಯುವತಿ, ಅಪ್ರಾಪ್ತೆ ಆಗಿದ್ದ ಸಂದರ್ಭದಲ್ಲಿ ಯುವಕನೊಬ್ಬನಿಂದ ಪ್ರೀತಿಯ ಹೆಸರಲ್ಲಿ ದೌರ್ಜನ್ಯಕ್ಕೆ ಒಳಗಾಗಿದ್ದಳು. ಈ ಸಂಬಂಧ ದೂರು ದಾಖಲಾದ ಬಳಿಕ ಆರೋಪಿಯನ್ನು ಪೋಕ್ಸೊ ಕಾಯ್ದೆ ಅಡಿ ಬಂಧಿಸಲಾಗಿತ್ತು. ಇತ್ತೀಚೆಗಷ್ಟೇ ಆತ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ನಿನ್ನೆಯಷ್ಟೇ ಶಾಲಿನಿ ನಿಶ್ಚಿತಾರ್ಥ ಬೇರೆ ಯುವಕನೊಂದಿಗೆ ನಡೆದಿತ್ತು. ಆದರೆ, ಇಂದು ಆಕೆಯ ಅಪಹರಣವಾಗಿದೆ.
ಜೈಲಿನಿಂದ ಬಿಡುಗಡೆಯಾಗಿದ್ದ ಜ್ಜನೇಶ್ವರ್ ಅಲಿಯಾಸ್ ಜಾವು ಅಪಹರಣದಲ್ಲಿ ಭಾಗಿಯಾಗಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಎರಡು ತಂಡಗಳನ್ನು ರಚಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ಕೆ.ಜೆ. ಜಾರ್ಜ್​ಗೆ ಆದ ರೀತಿ ನನಗೂ ಆಗಬೇಕು, ನಾನು 40 ವರ್ಷ ಪಾರ್ಟಿ ಕಟ್ಟಿ ಬೆಳೆಸಿದ್ದೇನೆ: ಕೆ.ಎಸ್​. ಈಶ್ವರಪ್ಪ

ವಿಜಯಾನಂದ ಚಿತ್ರ ಯುವ ಸಮುದಾಯಕ್ಕೆ ಮಾದರಿ: ಸಿಎಂ ಬೊಮ್ಮಾಯಿ ಮೆಚ್ಚುಗೆ

ಬೀಚ್​ಗೆ ಮೈತುಂಬ ಬಟ್ಟೆ ಹಾಕ್ಕೊಂಡು ಬಂದು ಟ್ರೋಲ್​ ಆದ ಬೋಲ್ಡ್​ ಬ್ಯೂಟಿ ಉರ್ಫಿ ಜಾವೇದ್​!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 × five =
Remember me
