ಲಖನೌ:ಉತ್ತರ ಪ್ರದೇಶದಲ್ಲಿ ಮಂಕಿಪಾಕ್ಸ್​ ವೈರಸ್​ ಭೀತಿ ಹೆಚ್ಚಳವಾಗಿರುವುದರಿಂದ ತೀವ್ರ ಕಟ್ಟುನಿಟ್ಟಿನ ನಿಯಮ ಪಾಲಿಸಲು ಆರೋಗ್ಯ ಇಲಾಖೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಸೂಚಿಸಿದ್ದಾರೆ.
ಮಂಕಿಪಾಕ್ಸ್​​ ವೈರಸ್​ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಈ ಬಗ್ಗೆ ನಿಯಮಗಳನ್ನು ಜಾರಿಗೆ ತಂದು ವೈರಸ್​ ಹರಡದಂತೆ ಕಟ್ಟೆಚ್ಚರ ವಹಿಸಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.ವೈರಸ್​ ಕುರಿತ ಕೇಂದ್ರ ಸರ್ಕಾರ ಕೂಡ ರಾಜ್ಯ ಸರ್ಕಾರಗಳಿಗೆ ನಿಯಮಾವಳಿಗಳನ್ನು ಜಾರಿಗೊಳಿಸಿದ್ದು, ಅದರ ಪಾಲನೆಯಾಗಬೇಕೆಂದು ಸಿಎಂ ತಿಳಿಸಿದ್ದಾರೆ.
ಒಂದು ಪ್ರಕರಣವೂ ರಾಜ್ಯದಲ್ಲಿ ದಾಖಲಾಗಬಾರದು, ವಿದೇಶಗಳಿಂದ ಬರುವವರ ಮೇಲೆ ಹದ್ದಿನ ಕಣ್ಣಿಡಬೇಕು, ಅವರ ತಪಾಸಣೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಿದ್ದಾರೆ. ಈ ಮದ್ಯೆ ಲಕ್ಷಣಗಳು ಕಂಡುಬಂದಲ್ಲಿ ಅಂತಹವರಿಗೆ ಕಡ್ಡಾಯ ರಕ್ತ ಪರೀಕ್ಷೆ ಮಾಡಿಬೇಕು, ಯಾರೇ ರೋಗಿಗಳು ಬಂದರೂ ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ನೀಡಲು ಸಿದ್ಧರಾಗಿರಬೇಕೆಂದು ಹೇಳಿದ್ದಾರೆ.(ಏಜೆನ್ಸೀಸ್​)
VIDEO: ಉದ್ಘಾಟಿಸಿದ ಮರುಕ್ಷಣವೇ ಕುಸಿದ ಸೇತುವೆ! ಮೇಯರ್​ ಸೇರಿ 8 ಮಂದಿಗೆ ಗಾಯ

KSRTC ಬಸ್​​ನಲ್ಲಿ ಕಳ್ಳಿಯರ ಕರಾಮತ್ತು: ಬಸ್​​ ಅಡ್ಡಗಟ್ಟಿ ಮೂವರನ್ನು ಸೆರೆ ಹಿಡಿದ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
