ಹೈದರಾಬಾದ್:ರೀಲ್ಸ್​ ಹುಚ್ಚು ಎಂತಹವರನ್ನೂ ಸೆಳೆದುಕೊಳ್ಳುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹೈಲೈಟ್ ಆಗಲು ಯುವಕರು ಹುಚ್ಚು ಸಾಹಸಗಳಿಗೆ ಕೈಹಾಕುತ್ತಿದ್ದಾರೆ. ಇದರ ಪರಿಣಾಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹದ್ದೇ ಘಟನೆಯೊಂದು ಶನಿವಾರ(ಜು.21) ಹೈದರಾಬಾದ್​ನಲ್ಲಿ ನಡೆದಿದೆ.
ಇದನ್ನೂ ಓದಿ:‘ನೀನಿಲ್ಲದ ಈ ಜಗತ್ತು ಸುಂದರವಲ್ಲ’: ನಟ ಸೋನುಸೂದ್ ಭಾವುಕ
ಭಾರಿ ಮಳೆಯಲ್ಲಿ ಹೈದರಾಬಾದ್-ವಿಜಯವಾಡ ಹೆದ್ದಾರಿಯ ಅಂಬರ್ ಪೇಟೆಯಲ್ಲಿ ಬೈಕ್‌ನಲ್ಲಿ ಸ್ಟಂಟ್ಸ್​ ಮತ್ತು ರೀಲ್ಸ್​ಗಾಗಿ ವೀಡಿಯೋ ಮಾಡುತ್ತ ಇಬ್ಬರು ಯುವಕರು ಹೊರಟಿದ್ದರು. ಇವರಲ್ಲಿ ಸವಾರ ಬೈಕ್ ಸ್ಟಂಟ್ ಮಾಡುತ್ತಿದ್ದರೆ, ಹಿಂಬದಿ ಕುಳಿತಿದ್ದ ಮತ್ತೊಬ್ಬ ಯುವಕ ವಿಡಿಯೋ ಮಾಡುತ್ತಿದ್ದಾನೆ.
ಸವಾರ ಶಿವ ಚಲಿಸುತ್ತಿದ್ದ ಬೈಕ್‌ನ ಮುಂದಿನ ಚಕ್ರವನ್ನು ಏಕಾಎಕಿ ಮೇಲೆತ್ತಿದ್ದಾನೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ನೇಹಿತರು ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಶಿವ ಮೃತಪಟ್ಟಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬೈಕ್​ನಲ್ಲಿ ಹಿಂದೆ ಕುಳಿತಿದ್ದ ಮಗನ ಸಾವಿನ ಸುದ್ದಿ ಕೇಳಿ ತಂದೆ ತಾಯಿಗೆ ಬರಸಿಡಿಲು ಬಡಿದಂತಾಗಿದೆ. ಅವರ ದುಃಖದ ಕಟ್ಟೆ ಒಡೆದಿದ್ದು ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಹಿಳೆ ತಲೆಗೆ ಶಸ್ತ್ರಚಿಕಿತ್ಸೆ ಮಾಡಿ 77 ಸೂಜಿಗಳ ತೆರವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 13 =
Remember me
