ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಮತ್ತು ವಸ್ತುಗಳು ಅಥವಾ ಇನ್ಯಾವುದನ್ನೋ ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಪ್ರಕರಣ; ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಈ ಆಪ್ಟಿಕಲ್ ಇಲ್ಯೂಷನ್​ಗಳು ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ನೀವು ಕತ್ತರಿಸಿದ ಕಲ್ಲಂಗಡಿ ಹಣ್ಣುಗಳ ಸಾಕಷ್ಟು ತುಂಡುಗಳನ್ನು ನೋಡಬಹುದು. ಅವುಗಳ ನಡುವೆ ಒಂದೇ ಒಂದು ಬೀಜರಹಿತ ಕಲ್ಲಂಗಡಿ ಹಣ್ಣಿನ ತುಂಡು ಇದೆ. ಅದನ್ನು ಕೆಲವೇ ಸೆಕೆಂಡ್​ಗಳಲ್ಲಿ ಪತ್ತೆ ಹಚ್ಚಬೇಕು. ಆದರೆ, ಅದು ಸುಲಭವಲ್ಲ. ನಮ್ಮ ತಲೆ ಮತ್ತು ಕಣ್ಣಿಗೆ ಸ್ಪಲ್ಪ ಕೆಲಸ ಕೊಡಬೇಕಾಗುತ್ತದೆ. ಸೂಕ್ಷ್ಮವಾಗಿ ಗಮನಿಸಿದರೆ ಕಾಣಿಸುತ್ತದೆ. ಆದರೆ, ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಬೀಜರಹಿತ ಕಲ್ಲಂಗಡಿ ಹಣ್ಣಿನ ತುಂಡನ್ನು ಪತ್ತೆ ಹಚ್ಚ ಬೇಕು. ನಿಮ್ಮ ಸಮಯ ಈಗ ಶುರು.
ಇದನ್ನೂ ಓದಿ:ಮೊದಲ ಪಂದ್ಯದಲ್ಲೇ ಗಾಯ; IPLನಲ್ಲಿ ಕೇನ್​ ವಿಲಿಯಮ್ಸನ್​​​ ಮುಂದುವರೆಯುವುದು ಡೌಟ್​
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಬೀಜರಹಿತ ಕಲ್ಲಂಗಡಿ ಹಣ್ಣಿನ ತುಂಡನ್ನು ಪತ್ತೆಹಚ್ಚಿದ್ದಲ್ಲಿ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಹಣ್ಣಿನ ತುಂಡನ್ನು ಗುರುತಿಸಲು ಸಾಧ್ಯವಾಗದೇ ಎಲ್ಲಿ ಅಂತಾ ಹುಡುಕಾಡುತ್ತಿದ್ದರೆ, ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

VIDEO | ಇಬ್ಬರು ಯುವತಿಯರೊಂದಿಗೆ ಬೈಕ್​ನಲ್ಲಿ ವೀಲ್ಹಿಂಗ್; ತಪ್ಪಿತಸ್ಥರ ಪತ್ತೆಗೆ ಬಲೆ ಬೀಸಿದ ಪೊಲೀಸರು!

ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಎಚ್​.ಡಿ.ಕುಮಾರಸ್ವಾಮಿ

ಮೊದಲ ಪಂದ್ಯದಲ್ಲೇ ಗಾಯ; IPLನಲ್ಲಿ ಕೇನ್​ ವಿಲಿಯಮ್ಸನ್​​​ ಮುಂದುವರೆಯುವುದು ಡೌಟ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + thirteen =
Remember me
