ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ದೃಷ್ಟಿ ಭ್ರಮೆ ಎಂದರೇನು?ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಮೋಜಿನ ಮಾರ್ಗಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತವೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಒಂದು ಜಾಗದಲ್ಲಿ ಮರದ ದಿಮ್ಮಿಗಳ ರಾಶಿಯನ್ನು ಕಾಣಬಹುದು. ಮರದ ತುಂಡುಗಳ ನಡುವೆ ಒಂದು ನಾಯಿಯೂ ಇದೆ. ಅದು ಎಲ್ಲಿದೆ ಅಂತಾ ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭವಲ್ಲ. ಏಕೆಂದರೆ, ಅಷ್ಟು ಸುಲಭವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ನಾಯಿಯ ಬಣ್ಣ ಮತ್ತು ಮರದ ದಿಮ್ಮಿಯ ಬಣ್ಣ ಒಂದೇ ರೀತಿ ಇದೆ. ಆದ್ದರಿಂದ ನೋಡುಗರಿಗೆ ಗೊಂದಲ ಮೂಡಿಸುತ್ತದೆ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ನಾಯಿಯು ಎಲ್ಲಿದೆ ಎಂದು ಗೊತ್ತಾಗುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ ನಾಯಿಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ನಾಯಿಯನ್ನು ಪತ್ತೆಹಚ್ಚಿದ್ದರೆ, ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಅಲ್ಲದೆ, ನಿಮ್ಮಂತಹ ಜೀನಿಯಸ್​ ಯಾರೂ ಇಲ್ಲ ಎಂದು ಭಾವಿಸಿ. ಒಂದು ವೇಳೆ ನಿಮ್ಮಿಂದ ನಾಯಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದ್ದಾನೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ಕಣ್ಣಿಗೊಂದು ಸವಾಲ್​: ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ 3ನೇ ಶ್ವಾನವನ್ನು ಪತ್ತೆಹಚ್ಚಬಲ್ಲರು!

ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ ಈ ಫೋಟೋದಲ್ಲಿರುವ ನಾಯಿಯನ್ನು ಪತ್ತೆಹಚ್ಚಿ! ಶೇ. 90 ಮಂದಿ ಕೈಯಲ್ಲಿ ಆಗಿಲ್ಲ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:three × 2 =
Remember me
