ಉತ್ತರಪ್ರದೇಶ:ಮಾವ್​ ಜಿಲ್ಲೆಯ ಘೋಸಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯನ್ನು ಕೊಳವೆ ಬಾವಿಗೆ ಎಸೆಯಲಾಗಿದೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ ಸದ್ಯ ಇಬ್ಬರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸಂತ್ರಸ್ತೆಯ ತಂದೆ ನೀಡಿರುವ ದೂರಿನ ಪ್ರಕಾರ, ಶುಕ್ರವಾರ ಬೆಳಗ್ಗೆ ಕಸ ಎಸೆಯಲು ಹೋಗಿದ್ದ ಬಾಲಕಿಯನ್ನು ಆರೋಪಿಗಳು ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಸಂದರ್ಭ ಕಿರುಚಾಟ ಕೇಳಿರುವ ಕೆಲವು ಕಾರ್ಮಿಕರು ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸಂತ್ರಸ್ತೆಯನ್ನು ಪ್ರಾಣಾಪಾಯದಿಂದ ಕಾಪಾಡಲಾಗಿದೆ.
“ಸಂತ್ರಸ್ತ ಬಾಲಕಿ ತನ್ನ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ಕೃಷಿಗೆ ಬಳಸುತ್ತಿದ್ದ ಬಾವಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಕೈ-ಕಾಲುಗಳನ್ನು ಕಟ್ಟಿ ಬಾಯಿಯೊಳಗೆ ಬಟ್ಟೆಯನ್ನು ತುರುಕಲಾಗಿತ್ತು” ಎಂದು ಹೆಚ್ಚುವರಿ ಎಸ್ಪಿ ತ್ರಿಭುವನ್ ನಾಥ್ ತಿಳಿಸಿದ್ದಾರೆ.
‘ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದ್ದು , ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು’ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 18 =
Remember me
