ತಮಿಳುನಾಡು:ಕುರ್ಟಾಲಂ ಜಲಪಾತದಲ್ಲಿ ಬಿದ್ದಿದ್ದ ಮಗುವನ್ನು ರಕ್ಷಿಸಿದ್ದ ವಿಜಯ ಕುಮಾರ್​ಗೆ ತೂತುಕುಡಿ ಜಿಲ್ಲಾಧಿಕಾರಿಗಳ ಕಾರು ಚಾಲಕನಾಗಿ ತಾತ್ಕಾಲಿಕವಾಗಿ ಕೆಲಸ ನೀಡಲಾಗಿದೆ.
ತೂತುಕುಡಿ ಸಮೀಪದ ವಿಲತ್ತಿಕುಲಂ ನಿವಾಸಿಯಾದ ವಿಜಯ ಕುಮಾರ್​, ಆ ಪ್ರದೇಶದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕುರ್ಟಾಲಂ ಜಲಪಾತಕ್ಕೆ ಹೋಗಿದ್ದ. ಆ ವೇಳೆ ಅಲ್ಲಿಗೆ ಕೇರಳ ರಾಜ್ಯದ ಪಾಲಕ್ಕಾಡ್‌ನ ಹರಿಣಿ ಎಂಬ ಮಗು ತನ್ನ ಕುಟುಂಬ ಸಮೇತ ಪ್ರವಾಸ ಬಂದಿದ್ದರು. ಕುಟುಂಬದ ಸದಸ್ಯರೊಂದಿಗೆ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮಗು ನೀರಿಗೆ ಬಿದ್ದು, ಬಂಡೆಗಳ ನಡುವೆ ಸಿಲುಕಿಕೊಂಡಿದ್ದರು.
ಇದನ್ನೂ ಓದಿ:7.9ಲಕ್ಷ ರೂ. ಖರ್ಚು ಮಾಡಿ ವಿಶ್ವದಲ್ಲೇ ಅತಿ ದೊಡ್ಡ ತುಟಿ ಪಡೆದ ಯುವತಿ!
ವಿಜಯ ಕುಮಾರ್ ತಕ್ಷಣ ನೀರಿಗೆ ಹಾರಿ, ಮಗುವನ್ನು ಎತ್ತಿಕೊಂಡು ಕೆಲವೇ ನಿಮಿಷಗಳಲ್ಲಿ ಸುರಕ್ಷಿತ ಸ್ಥಳಕ್ಕೆ ಕರೆತಂದಿದ್ದ. ವಿಜಯ ಕುಮಾರ್  ಈ ಸಾಹಸಕ್ಕೆ ಸ್ಥಳದಲ್ಲಿದ್ದವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಜಿಲ್ಲಾಧಿಕಾರಿ ಸೆಂಥಿಲ್ ರಾಜ್ ವಿಜಯ ಕುಮಾರ್ ಅವರನ್ನು ಸನ್ಮಾನಿಸಿ, ಪ್ರಶಂಸಾ ಪತ್ರ ನೀಡಿ ಗೌರವಿಸಿದ್ದರು. ಫೆ. 23 ರಂದು ವಿಜಯ ಕುಮಾರ್ ಅವರಿಗೆ ತೂತುಕುಡಿ ಜಿಲ್ಲಾಧಿಕಾರಿ ಸೆಂಥಿಲ್ ರಾಜ್ ಅವರಿಗೆ ಕಾರು ಚಾಲಕನಾಗಿ ತಾತ್ಕಾಲಿಕವಾಗಿ ಕೆಲಸ ನೀಡಲಾಗಿದೆ.
ಭೀಕರ ಅಪಘಾತ; ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟ್ರಕ್​ಗೆ ಮಿನಿ ಟ್ರಕ್​ ಡಿಕ್ಕಿ, 7 ಮಂದಿ ಮೃತ್ಯು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − thirteen =
Remember me
