ಆಗ್ರಾ:ಯುವಕನೊಬ್ಬ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿ ಆಕೆಯ ಅಶ್ಲೀಲ ಛಾಯಾಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಇದನ್ನೂ ಓದಿ:ದೆವ್ವ ಹಿಡಿದಿದೆ ಎಂದು ತಾಂತ್ರಿಕನಿಂದ ಭೂತೋಚ್ಚಾಟನೆ: ಮೂಡನಂಬಿಕೆಯಿಂದಾಗಿ ಪ್ರಾಣಬಿಟ್ಟ ಗರ್ಭಿಣಿ
ರಾಜ್ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಆತ ಹರಿಪರ್ವತ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬರುವ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಗೆಳೆತನವನ್ನು ಬೆಳೆಸಿದ್ದಾನೆ. ದಿನಗಳೆದಂತೆ ಇಬ್ಬರ ನಡುವೆ ಸ್ನೇಹವು ಆಳವಾಗಿ ಬೇರೂರಿದ್ದು, ಈ ನಡುವೆ ಆತ ಕದ್ದು ಮುಚ್ಚಿ ಆಕೆಯ ಅಶ್ಲೀಲ ಫೋಟೋಗಳನ್ನು ತೆಗೆದಿದ್ದ. ಇದಾದ ನಂತರ ಸುಮ್ಮನೀರದ ಆರೋಪಿಯು ಬ್ಲಾಕ್ ಮೇಲ್ ಮಾಡಿ ವಿದ್ಯಾರ್ಥಿನಿಯಿಂದ 50 ಸಾವಿರ ರೂ. ಪಡೆಯಲು ಸಫಲನಾಗಿದ್ದ.
ಇದಾದ ಕೆಲದಿನಗಳ ಬಳಿಕ ಆತ ಆಕೆಗೆ ಪದೇ ಪದೇ ಪೋಟೋ ಇಟ್ಟುಕೊಂಡು ಹಣ ವಸೂಲಿ ಮಾಡತೊಡಗಿದ್ದು, ಈ ನಡುವೆ ಆಕೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ತನಗೆ ಒಂದು ಲಕ್ಷ ರೂಪಾಯಿಗೆ ನೀಡುವಂತೆ ಬೇಡಿಕೆಯಿಟ್ಟಿದ್ದ. ಸದ್ಯ, ಪೋಟೋಗಳು ವೈರಲ್​ ಆದ ಬೆನ್ನಲ್ಲೇ ಆರೋಪಿ ವಿರುದ್ಧ ವಿದ್ಯಾರ್ಥಿನಿಯು ಪ್ರಕರಣ ದಾಖಲಿಸಿದ್ದಾಳೆ.
ಇದನ್ನೂ ಓದಿ:ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮುಸ್ಲಿಮರೂ ಹಿಂದೂಗಳಾಗಿದ್ದರು: ಗುಲಾಂ ನಬಿ ಆಜಾದ್
ಇಷ್ಟಕ್ಕೆ ಸುಮ್ಮನಾಗದ ಆರೋಪಿಯು ಆಕೆಯ ಸಹೋದರನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಬಂಧನಕ್ಕೆ ಯತ್ನಿಸುತ್ತಿದ್ದು, ಸದ್ಯ ಆತ ನಾಪತ್ತೆಯಾಗಿದ್ದಾನೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
