ಹೈದರಾಬಾದ್​:ಇಂದಿನ ಯುವ ಪೀಳಿಗೆಯಲ್ಲಿ ರೀಲ್ಸ್ ಮಾಡುವ ಹುಚ್ಚು ತುಸು ಹೆಚ್ಚಾಗಿಯೇ ಇದೆ. ಎಲ್ಲೆಂದರಲ್ಲಿ ರೀಲ್ಸ್ ಮಾಡುವುದನ್ನು ಕೆಲವರು ಚಟವಾಗಿಸಿಕೊಂಡಿದ್ದಾರೆ. ಇಂಥವರು ಏನಾದರೂ ಒಂದು ಕೀಟಲೆ, ಚೇಷ್ಟೆ, ಮಾಡುತ್ತಲೇ ಇರುತ್ತಾರೆ. ಆದರೆ ಇದೇ ರೀಲ್ಸ್ ಹುಚ್ಚು ಇಲ್ಲೊಬ್ಬನ ಪ್ರಾಣವನ್ನೇ ತೆಗೆದಿದೆ.
ಹೈದರಾಬಾದ್​ನಲ್ಲಿ ನಡೆದಿರುವ ಘಟನೆಯಲ್ಲಿ ಸನತ್ ನಗರದ ನಿವಾಸಿ 16 ವರ್ಷದ ಸರ್ಪರಾಜ್ ಮರಣ ಹೊಂದಿದ್ದಾನೆ. ಸ್ನೇಹಿತರೊಂದಿಗೆ ರೈಲ್ವೆ ಹಳಿಯ ಪಕ್ಕದಲ್ಲಿ ನಿಂತು ರೀಲ್ಸ್ ರೆಕಾರ್ಡ್ ಮಾಡುತ್ತಿದ್ದ. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಟ್ರೈನ್ ಯುವಕನಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಶುಲ್ಕ ಪಾವತಿಸದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷೆ; ಶಿಕ್ಷಕಿ ಅಮಾನತು!
ಪರಿಣಾಮವಾಗಿ ಸರ್ಪರಾಜ್ ಸ್ಥಳದಲ್ಲೇ ಮೃತಪಟ್ಟಿದ್ದು, ಬಾಳಿ ಬದುಕಬೇಕಾದ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆಯನ್ನು ಆತನ ಸ್ನೇಹಿತನ ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ.ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − one =
Remember me
