ತಮಿಳುನಾಡು:ನೆರೆಯ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಆಕಸ್ಮಿಕವಾಗಿ ಒಲೆಯ ಮೇಲಿದ್ದ ಬಿಸಿ ರಸಂನ ಕಡಾಯಿಗೆ ಬಿದ್ದು 21 ವರ್ಷದ ಯುವಕ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಂತ್ರಸ್ತ ಕಾಲೇಜು ವಿದ್ಯಾರ್ಥಿಯಾಗಿದ್ದು, ಕೇಟರಿಂಗ್​ ಸಂಸ್ಥೆಯಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದ. ಕಳೆದ ವಾರ ಮದುವೆ ಸಮಾರಂಭವೊಂದರಲ್ಲಿ ಅತಿಥಿಗಳಿಗೆ ಊಟ ಬಡಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತಿಥಿಗಳಿಗೆ ಬಡಿಸಲು ರಸಂ ಅನ್ನು ಬಿಸಿ ಮಾಡುತ್ತಿದ್ದಾಗ ಕುದಿಯುತ್ತಿದ್ದ ಕಡಾಯಿಗೆ ಯುವಕ ಬಿದ್ದಿದ್ದಾನೆ. ತೀವ್ರ ಸುಟ್ಟಗಾಯಗಳಾಗಿರುವ ಸಂತ್ರಸ್ತನನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 30ರಂದು ಆತ ಮೃತಪಟ್ಟಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
