ಲಖನೌ:ಬಿಜೆಪಿ ಶಾಸಕರ ಮನೆಯಲ್ಲೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಶ್ರೇಷ್ಠ ತಿವಾರಿ (24) ಮೃತ ಯುವಕ. ಲಖನೌದ ಹಜರತ್​ಗಂಜ್​ ಏರಿಯಾದಲ್ಲಿ ಇರುವ ಬಿಜೆಪಿ ಶಾಸಕ ಯೇಗೇಶ್​ ಶುಕ್ಲ ಅವರ ಸರ್ಕಾರಿ ನಿವಾಸದಲ್ಲಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ತಿವಾರಿ ಬಾರಾಬಂಕಿ ಜಿಲ್ಲೆಯ ಹೈದರ್​ಗಢ ಏರಿಯಾದ ನಿವಾಸಿ.
ತಿವಾರಿ ಅವರು ಲಖನೌದ ಬಕ್ಷಿ ಕಾ ತಲಾಬ್ ಅಸೆಂಬ್ಲಿ ಕ್ಷೇತ್ರದ ಶಾಸಕ ಯೋಗೇಶ್ ಶುಕ್ಲಾರಿಗೆ ಸಂಬಂಧಿಸಿದ ಮಾಧ್ಯಮ ತಂಡದ ಸದಸ್ಯರಾಗಿದ್ದರು. ಶುಕ್ಲಾ ಅವರ ಹಜರತ್‌ಗಂಜ್ ನಿವಾಸದಲ್ಲಿ ನೇಣು ಬಿಗಿದುಕೊಂಡು ತಿವಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಅಕ್ರಮ ಸಂಬಂಧದ ಸುಳಿಯಲ್ಲಿ ಸಿಲುಕಿ ಇಬ್ಬರು ಪೊಲೀಸ್​ ಕಾನ್ಸ್​ಟೇಬಲ್​ ದುರಂತ ಸಾವು
ಕೌಟುಂಬಿಕ ಕಲಹದಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ, ತಿವಾರಿ ಸಾವಿಗೆ ನಿಖರ ಕಾರಣ ಏನೆಂದು ಖಚಿತಪಡಿಸಿಕೊಳ್ಳಲು ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಸದ್ಯ ಶ್ರೇಷ್ಠ ತಿವಾರಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ನಿಂತಿದ್ದ ಲಾರಿಗೆ ಬಸ್ ಡಿಕ್ಕಿ​; ಮೋದಿ ಸಮಾವೇಶಕ್ಕೆ ತೆರಳುತ್ತಿದ್ದ 39ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯ

ಏಷ್ಯನ್​ ಗೇಮ್ಸ್​; ವಿಶ್ವದಾಖಲೆಯೊಂದಿಗೆ ಚಿನ್ನ ಗೆದ್ದ ಭಾರತದ ಶೂಟರ್​ಗಳು

ಏಷ್ಯನ್​ ಗೇಮ್ಸ್​; ವಿಶ್ವದಾಖಲೆಯೊಂದಿಗೆ ಚಿನ್ನ ಗೆದ್ದ ಭಾರತದ ಶೂಟರ್​ಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eight =
Remember me
