ಘಾಜಿಯಾಬಾದ್​:ಕಳೆದ ಕೆಲ ದಿನಗಳಿಂದ ಜಿಮ್​ನಲ್ಲಿ ವರ್ಕೌಟ್​ ಮಾಡುವ ವೇಳೆ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಅತಿಯಾದ ವ್ಯಾಯಾಮ, ಪ್ರೋಟೀನ್​ ಶೇಕ್, ಹೆಚ್ಚಿನ ಒತಡ ​​ಸೇರಿದಂತೆ ಇತರೆ ಅಂಶಗಳಿಂದ ಹೃದಯಾಘಾತ ಸಂಭವಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ.
ಇದೀಗ ಜಿಮ್​ನಲ್ಲಿ ವರ್ಕೌಟ್​ ಮಾಡುವ ವೇಳೆ ಯುವಕನೊಬ್ಬ ಹಠಾತ್​ ಕುಸಿದು ಬಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
#ShockingA 19 years old young man died while#runningon a#treadmillin a#Gymin#Ghaziabad.#CCTVfootage of this entire incident shows that this 19 year old boy fell on the treadmill and died.It is believed that he died because of#heartattack#gymboy#runpic.twitter.com/9kuSZ0MlZC
ಇದನ್ನೂ ಓದಿ:VIDEO| ವಿಶ್ವದಲ್ಲೇ ಅತಿ ಉದ್ದದ ಕೂದಲು ಬೆಳೆಸಿ ಗಿನ್ನಿಸ್​ ದಾಖಲೆ ಬರೆದ ಬಾಲಕ
ಮೃತರನ್ನು ಬಿಹಾರ ಮೂಲದ ಸಿದ್ಧಾರ್ಥ್​ಕುಮಾರ್​ ಸಿಂಗ್​ (19) ಎಂದು ಗುರುತಿಸಲಾಗಿದೆ. ಘಾಜಿಯಾಬಾದ್​ನ ಸರಸ್ವತಿ ವಿಹಾರದಲ್ಲಿರುವ ಜಿಮ್​ನಲ್ಲಿ ವರ್ಕೌಟ್​ ಮಾಡುವ ವೇಳೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಥ್ರೆಡ್​ಮಿಲ್​ನಲ್ಲಿ ವ್ಯಾಯಾಮ ಮಾಡುವಾಗ ಹಠಾತ್​ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಮತ್ತಿಬ್ಬರು ಕೂಡಲೇ ಅವರ ರಕ್ಷಣೆಗೆ ಧಾವಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ವೈದ್ಯರು ಯುವಕ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಯುವಕನ ಮೃತದೇಹವನ್ನು ಆತನ ಪೋಷಕರು ಬಿಹಾರದಲ್ಲಿರುವ ಸ್ವಗ್ರಾಮಕ್ಕೆ ಕೊಂಡೊಯ್ದಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:two × 1 =
Remember me
