ಕೋಲ್ಕತ:ಬಾಂಗ್ಲಾದೇಶದ 50ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿರುವ ಬೆನ್ನಲ್ಲೇ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ವಿರುದ್ಧ ಗುಡುಗಿದ್ದಾರೆ. ಪ್ರಧಾನಿಯ ವೀಸಾ ನಿಷೇಧಿಸಬೇಕು ಎಂದು ಹೇಳಿದ್ದಾರೆ.
ನಮ್ಮ ರಾಜ್ಯದಲ್ಲಿ ಚುನಾವಣೆ ಆರಂಭವಾಗಿದೆ. ಈ ಸಮಯದಲ್ಲಿ ನಮ್ಮ ಪ್ರಧಾನಿಯವರು ಬಾಂಗ್ಲಾದೇಶಕ್ಕೆ ತೆರಳುತ್ತಾರೆ. ಅಲ್ಲಿ ನಮ್ಮ ಪಶ್ಚಿಮ ಬಂಗಾಳದ ಬಗ್ಗೆಯೇ ಮಾತನಾಡುತ್ತಾರೆ. ಈ ಹಿಂದೆ 2019ರ ಲೋಕಸಭಾ ಚುನಾವಣೆ ವೇಳೆ ನಾವು ಬಾಂಗ್ಲಾದೇಶದ ಒಬ್ಬ ನಟರನ್ನು ಪ್ರಚಾರಕ್ಕೆ ಕರೆಸಿದ್ದೆವು. ಆದರೆ ಬಾಂಗ್ಲಾದೇಶ ಸರ್ಕಾರವು ಅವರ ವೀಸಾವನ್ನೇ ರದ್ದು ಮಾಡಿತ್ತು. ಈಗ ನಮ್ಮಲ್ಲಿ ಚುನಾವಣೆ ಇರುವಾಗ ಪ್ರಧಾನಿ ಅಲ್ಲಿಗೆ ಹೋಗಿದ್ದಾರೆ ಮತ್ತು ಒಂದು ಬಗೆಯ ಮತದಾರರ ಮತವನ್ನು ಪಡೆಯಲು ಪ್ರಯತ್ನಿಸಿದ್ದಾರೆ. ಆದರೆ ಅವರ ವೀಸಾ ಏಕೆ ರದ್ದಾಗಿಲ್ಲ? ನಾವು ಈ ಕುರಿತಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪ್ರಧಾನಿಯವರು ಮಾಟುವಾ ಸಮುದಾಯದ ಆಧ್ಯಾತ್ಮಿಕ ಗುರು ಹರಿಚಂದ್ ಠಾಕೂರ್ ಅವರ ಜನ್ಮಸ್ಥಳವಾದ ಒರಕಂಡಿಯ ದೇವಸ್ಥಾನವೊಂದಕ್ಕೆ ಭೇಟಿ ನೀಡಿರುವ ಬಗ್ಗೆಯೂ ಮಮತಾ ಮಾತನಾಡಿದ್ದಾರೆ. ಒರಕಂಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಹಿಂದೂಗಳೇ ಹೆಚ್ಚಿದ್ದಾರೆ. ಅದೇ ಕಾರಣಕ್ಕೆ ಪ್ರಧಾನಿ ಅಲ್ಲಿ ಭೇಟಿ ನೀಡಿ ಮತ ಪಡೆಯುವ ಪ್ರಯತ್ನ ಮಾಡಿದ್ದಾರೆ. ಬಾಂಗ್ಲಾದೇಶದವರನ್ನು ಮಮತಾ ಒಳನುಸುಳಿಸಿಕೊಂಡಿದ್ದಾರೆ ಎಂದು ದೂರುತ್ತಾರೆ. ಈಗ ಅವರೇ ಈ ರೀತಿ ಬಾಂಗ್ಲಾಕ್ಕೆ ತೆರಳಿ ಅಲ್ಲಿ ಮತ ಪಡೆಯಲು ಯತ್ನಿಸಿದ್ದಾರೆ ಎಂದು ಅವರು ದೂರಿದ್ದಾರೆ. (ಏಜೆನ್ಸೀಸ್​)
ಬಿಜೆಪಿ ಸಂಸದೆ ಮೇಲೆ ವಿಷಕಾರಿ ಬಣ್ಣ ಎರಚಿದ ಟಿಎಂಸಿ! ಸೋಲುವ ಭಯದಿಂದ ಹೀಗೆಲ್ಲಾ ಮಾಡುತ್ತಿದ್ದಾರೆ ಎಂದ ಬಿಜೆಪಿ

VIDEO| ತಮಿಳುನಾಡಿನಲ್ಲಿ ಸ್ಮೃತಿ ಇರಾನಿಯ ದಾಂಡಿಯಾ; ಚುನಾವಣಾ ಪ್ರಚಾರದಲ್ಲಿ ಹೆಜ್ಜೆ ಹಾಕಿದ ಸಚಿವೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
