ಕೊಚ್ಚಿ:ಲಾಟರಿಯಲ್ಲಿ ಬಹುಮಾನವಾಗಿ 80 ಲಕ್ಷ ರೂ. ಬಂದ ಮಾರನೇ ದಿನವೇ ಯುವಕ ನಿಗೂಢವಾಗಿ ಮೃತಪಟ್ಟಿರುವ ಘಟನೆ ಕೇರಳದ ಪಂಗೋಡೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಪಂಗೋಡೆ ಮೂಲದ ಸಜೀವ್​ (35) ಎಂದು ಗುರುತಿಸಲಾಗಿದೆ. ಸ್ನೇಹಿತರ ಜತೆ ಸೇರಿ ಮದ್ಯದ ಪಾರ್ಟಿ ನಡೆಸುತ್ತಿದ್ದಾಗ ಮಣ್ಣಿನ ದಿಬ್ಬದಿಂದ ಬಿದ್ದು ಮೃತಪಟ್ಟಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಇದನ್ನೂ ಓದಿ:ಆನ್‌ಲೈನ್ ಗೇಮಿಂಗ್ ಆ್ಯಪ್‌ನಲ್ಲಿ 49 ರೂ. ಹೂಡಿಕೆ ಮಾಡಿದ ವ್ಯಕ್ತಿ ರಾತ್ರೋರಾತ್ರಿ ಕೋಟಿ ರೂ. ಒಡೆಯನಾದ!
ಪೊಲೀಸರ ಪ್ರಕಾರ, ಸಾವಿಗೂ ಹಿಂದಿನ ದಿನ ಸಜೀವ್ 80 ಲಕ್ಷ ರೂಪಾಯಿ ಲಾಟರಿ ಗೆದ್ದಿದ್ದರು. ಮರುದಿನ ಅವರ ಖಾತೆಗೆ ಹಣ ಬಂದಿದೆ. ಇದರ ಬೆನ್ನಲ್ಲೇ ಏಪ್ರಿಲ್​ 1ರಂದು ರಾತ್ರಿ ಪಾಂಗೋಡೆಯ ಚಂತಕ್ಕುನ್ನುನಲ್ಲಿರುವ ತನ್ನ ಸ್ನೇಹಿತನ ಬಾಡಿಗೆ ಮನೆಯಲ್ಲಿ ತನ್ನ ಸ್ನೇಹಿತರಿಗಾಗಿ ಮದ್ಯದ ಪಾರ್ಟಿ ಏರ್ಪಡಿಸಿದ್ದ. ಈ ವೇಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ.
ಸಜೀವ್​ನನ್ನು ಆತನ ಸ್ನೇಹಿತ ಸಂತೋಷ್ ಅಲಿಯಾಸ್​ ಮಾಯಾವಿ ಮಣ್ಣಿನ ದಿಬ್ಬದಿಂದ ಕೆಳಗೆ ತಳ್ಳಿದ್ದ ಎನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಸಜೀವ್​ನನ್ನು ಪಂಗೋಡೆಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ನಿನ್ನೆ ಸಂಜೆ ಮೃತಪಟ್ಟಿದ್ದಾರೆ. ಈ ಸಂಬಂಧ ಪಂಗೋಡೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ಏಜೆನ್ಸೀಸ್​)
ಕೆಲವು ಕ್ಷೇತ್ರಗಳಿಗೆ ಅಚ್ಚರಿ ಅಭ್ಯರ್ಥಿಗಳ ಆಯ್ಕೆ: ಸಿಎಂ ಬಸವರಾಜ ಬೊಮ್ಮಾಯಿ‌ ಸ್ಪಷ್ಟ ಸುಳಿವು

ಆನ್‌ಲೈನ್ ಗೇಮಿಂಗ್ ಆ್ಯಪ್‌ನಲ್ಲಿ 49 ರೂ. ಹೂಡಿಕೆ ಮಾಡಿದ ವ್ಯಕ್ತಿ ರಾತ್ರೋರಾತ್ರಿ ಕೋಟಿ ರೂ. ಒಡೆಯನಾದ!

ತಾಂತ್ರಿಕ ದೋಷ; ಬೆಂಗಳೂರಿನಿಂದ ಹೊರಟಿದ್ದ ಇಂಡಿಗೋ ವಿಮಾನ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
