ವೆಲ್ಲೋರ್​:ನೆರೆಹೊರೆಯ ಮೂವರು ಯುವಕರು 15 ವರ್ಷದ ಬಾಲಕಿ ಸ್ನಾನ ಮಾಡುತ್ತಿರುವ ದೃಶ್ಯವನ್ನು ಚಿತ್ರೀಕರಿಸಿಕೊಂಡು ದೈಹಿಕ ಸಂಪರ್ಕಕ್ಕೆ ಬ್ಲ್ಯಾಕ್​ಮೇಲ್​ ಮಾಡಿದ್ದರಿಂದ ಬೇಸತ್ತು ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ.
ಶನಿವಾರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆಕೆ ಬೆಂಕಿ ಹಚ್ಚಿಕೊಂಡಿದ್ದಳು. ಆದರೆ, ಆಕೆಯ ಚೀರಾಟ ಕೇಳಿಸಿಕೊಂಡು ಆಕೆಯ ನೆರವಿಗೆ ಧಾವಿಸಿದ ಅಕ್ಕಪಕ್ಕದ ಮನೆಯವರು, ಬೆಂಕಿ ನಂದಿಸಿ ವೆಲ್ಲೋರ್​ನ ಸರ್ಕಾರಿ ವೆಲ್ಲೋರ್​ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ:ಬೆಂಕಿ ಹಚ್ಚಿಕೊಂಡು ಅಣ್ಣ-ತಂಗಿ ಆತ್ಮಹತ್ಯೆ
ಶೇ.90 ಸುಟ್ಟುಗಾಯಗಳಿಂದ ಬಳಲುತ್ತಿರುವ ಸಂತ್ರಸ್ತೆ ತನಗೆ ಬ್ಲ್ಯಾಕ್​ಮೇಲ್​ ಮಾಡಿದ ಯುವಕರನ್ನು ನೆರೆಮನೆಯ ಕೆ. ಆಕಾಶ್​, ಆರ್​. ಗಣಪತಿ ಮತ್ತು 17 ವರ್ಷದ ಬಾಲಕ ಎಂದು ಗುರುತಿಸಿದ್ದಾಳೆ. ಈ ಮೂರು ಮಂದಿ ತಾನು ಸ್ನಾನ ಮಾಡುತ್ತಿರುವ ದೃಶ್ಯಗಳನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಅದನ್ನು ದೈಹಿಕ ಸಂಪರ್ಕಕ್ಕೆ ಸಹಕರಿಸದಿದ್ದರೆ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸುತ್ತಿದ್ದರು. ಹೀಗಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಗಿ ಆಕೆ ಹೇಳಿರುವುದಾಗಿ ಪೊಲೀಸ್ ಸಬ್​ಇನ್​ಸ್ಪೆಕ್ಟರ್​ ಶುಭಾ ತಿಳಿಸಿದ್ದಾರೆ.
ಸದ್ಯ ಮೂವರು ಯುವಕರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಂತ್ರಸ್ತೆ ಇದೀಗ ಪ್ರಜ್ಞಾಹೀನಸ್ಥಿತಿಯಲ್ಲಿದ್ದು, ದೇಹಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಹೇಳಿದ್ದಾರೆ.
ಬಿಳಿಯನ ರಕ್ಷಣೆಗೆ ಕಪ್ಪುವರ್ಣೀಯರೇ ಬರಬೇಕಾಯ್ತು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five + eighteen =
Remember me
