ಕಣ್ಣೂರು:ಪೊಲೀಸ್​ ವಾಹನವನ್ನು ತಡೆದು ಸೀಟ್​ ಬೆಲ್ಟ್​ ಯಾಕೆ ಧರಿಸಿಲ್ಲ ಎಂದು ಪ್ರಶ್ನೆ ಮಾಡಿದ ಯುವಕರಿಬ್ಬರನ್ನು ಬಂಧಿಸಿರುವ ಘಟನೆ ಕೇರಳದ ಪನೂರ್​​ನಲ್ಲಿ ನಡೆದಿದ್ದು, ಪೊಲೀಸರ ನಡೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಂಧಿತ ಯುವಕರನ್ನು ಫಯಿಜ್ ಮತ್ತು ಸನೂಪ್​ ಎಂದು ಗುರುತಿಸಲಾಗಿದೆ. ಪೊಲೀಸ್​ ಸಿಬ್ಬಂದಿ ಸೀಟ್​ ಬೆಲ್ಟ್​ ಧರಿಸದೇ ಇರುವುದನ್ನು ನೋಡಿದ ಯುವಕರು ತಕ್ಷಣ ಕಾರನ್ನು ತಡೆದು ಪ್ರಶ್ನೆ ಮಾಡಿದ್ದಾರೆ. ಆದರೆ, ಅವರ ವಿರುದ್ಧವೇ ಕಾರು ತಡೆದು ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಬಂಧನ ಮಾಡಿದ್ದಾರೆ.
ಇದನ್ನೂ ಓದಿ:ಇಸ್ರೇಲ್-ಹಮಾಸ್ ಯುದ್ಧ: ಕೆಲವು ವಾರಗಳ ಹಿಂದೆಯೇ ಇಸ್ರೇಲ್ ಮೇಲೆ ದಾಳಿ ನಡೆಸಲು ಯೋಜಿಸಿದ್ದ ಹಮಾಸ್, ಫೋಟೋಗಳು ವೈರಲ್
ಬಂಧಿತ ಯುವಕರು ಹೆಲ್ಮೆಟ್​ ಧರಿಸದೇ ವಾಹನ ಚಲಾಯಿಸುತ್ತಿದ್ದರು. ಹೀಗಾಗಿ ಅವರನ್ನು ತಡೆದು ಪೊಲೀಸರು ದಂಡ ವಿಧಿಸಿದ್ದರು. ಇದಾದ ಬಳಿಕ ಯುವಕರು ಪೊಲೀಸ್​ ವಾಹನವನ್ನು ತಡೆದು ಸೀಟ್​ ಬೆಲ್ಟ್​ ಧರಿಸದಿರುವುದನ್ನು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಕಾನೂನು ಎಲ್ಲರಿಗೂ ಒಂದೇ ಎಂದಿದ್ದಾರೆ. ಈ ವೇಳೆ ಪೊಲೀಸ್​ ಅಧಿಕಾರಿಗೂ ಮತ್ತು ಯುವಕರ ನಡುವೆ ಮಾತಿನ ಚಕಮಕಿಯಾದಾಗ ಸ್ಥಳೀಯರು ಸಹ ಯುವಕರ ನೆರವಿಗೆ ಧಾವಿಸಿದರು. ಪೊಲೀಸ್​ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಇದಾದ ಬಳಿಕ ಪ್ರಶ್ನೆ ಮಾಡಿದ ಯುವಕರ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಈ ಘಟನೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರ ನಡೆಯನ್ನು ನೆಟ್ಟಿಗರು ಖಂಡಿಸಿದ್ದಾರೆ. ಕಾನೂನು ಎಲ್ಲರಿಗೂ ಒಂದೇ. ನೀವೇನು ಪ್ರಶ್ನಾತೀತರೆ ಎಂದು ಪ್ರಶ್ನೆ ಮಾಡಿದ್ದಾರೆ.(ಏಜೆನ್ಸೀಸ್​)
ಖ್ಯಾತ ಹಿರಿಯ ಪತ್ರಕರ್ತ ಸಚ್ಚಿದಾನಂದ ಮೂರ್ತಿ ವಿಧಿವಶ

ಟಾಪ್ 10 ಶ್ರೀಮಂತ ಭಾರತೀಯರು: ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ ಅಗ್ರಸ್ಥಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
