ನವದೆಹಲಿ:ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದಲ್ಲದೆ, ಬಿಜೆಪಿ ವಕ್ತಾರೆ ಸ್ಥಾನದಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರ ತಲೆ ಕತ್ತರಿಸಿದ ವಿಡಿಯೋ ಸೃಷ್ಟಿಸಿದ ಪ್ರಕರಣದಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಫೈಸಲ್ ವಾನಿ ಎಂಬಾತನನ್ನು ಬಂಧಿಸಲಾಗಿದೆ.
ನೂಪುರ್​ ಶರ್ಮಾ ಟಿವಿ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆ ವಿವಾದಕ್ಕೆ ಒಳಗಾಗಿದ್ದರಿಂದ ಬಿಜೆಪಿ ಆಕೆಯನ್ನು ವಕ್ತಾರೆ ಸ್ಥಾನದಿಂದ ಅಮಾನತುಗೊಳಿಸಿತ್ತು. ಅದಾಗ್ಯೂ ಒಂದು ಸಮುದಾಯದವರ ಆಕ್ರೋಶ ತಣಿಯದಿರುವುದರಿಂದ ದೇಶಾದ್ಯಂತ ಆಕೆಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆದಿದೆ. ಇನ್ನು ಕೆಲವೆಡೆ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕೆಲವು ಪೊಲೀಸರೂ ಗಾಯಗೊಂಡಿದ್ದಾರೆ.
ಈ ಮಧ್ಯೆ ಕಾಶ್ಮೀರಿ ಯೂಟ್ಯೂಬರ್ ಫೈಸಲ್ ವಾನಿ ಎಂಬಾತ ವಿಎಫ್​ಎಕ್ಸ್ ಮೂಲಕ ವಿಡಿಯೋವೊಂದನ್ನು ಸೃಷ್ಟಿಸಿದ್ದಾರೆ. ಅದರಲ್ಲಿ ನೂಪುರ್ ಶರ್ಮಾ ಅವರ ತಲೆ ಕತ್ತರಿಸುವಂಥ ವಿಡಿಯೋ ಸೃಷ್ಟಿಸಿ ಸೋಷಿಯಲ್ ಮೀಡಿಯಾದಲ್ಲಿ ಅಪ್​ಲೋಡ್ ಮಾಡಲಾಗಿತ್ತು. ಈ ವಿಡಿಯೋ ವೈರಲ್​ ಆಗಿದ್ದು ತೀವ್ರ ವಿರೋಧಕ್ಕೆ ಒಳಗಾಗಿದ್ದಲ್ಲದೇ ವಿವಾದಕ್ಕೀಡಾಗಿತ್ತು.
ಇದರಿಂದ ಎಚ್ಚೆತ್ತ ಫೈಸಲ್ ವಾನಿ ಮರುದಿನವೇ ಇನ್ನೊಂದು ವಿಡಿಯೋ ಅಪ್​ಲೋಡ್ ಮಾಡಿ ತನ್ನ ‘ಡೀಪ್ ಪೇನ್ ಫಿಟ್​ನೆಸ್’​ ಚಾನೆಲ್​ನಲ್ಲಿ ಕ್ಷಮೆ ಯಾಚಿಸಿದ್ದ. ಈ ಮಧ್ಯೆ ಸಫಾ ಕಡಲ್​ ಠಾಣೆಯ ಪೊಲೀಸರು ಫೈಸಲ್ ವಾನಿಯನ್ನು ಇಂದು ಬಂಧಿಸಿದ್ದಾರೆ. ಅಲ್ಲದೆ ಸಾರ್ವಜನಿಕ ಶಾಂತಿಗೆ ಧಕ್ಕೆ, ಸಮಾಜದಲ್ಲಿ ಭೀತಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅಡ್ಡ ಮತದಾನ ಮಾಡಿದ ಶಾಸಕನನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್​
ಮಾರ್ಕ್ ಜುಕರ್​ಬರ್ಗ್​ ವಿದಾಯ ಹೇಳಿದ ಬೆನ್ನಿಗೇ ಮೆಟಾ ಸಿಒಒ ವಿರುದ್ಧ ತನಿಖೆ ಶುರು!; ಆರೋಪಗಳೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − four =
Remember me
