ಮುಂಬೈ:ಪ್ರಸಿದ್ಧ ಯೂಟ್ಯೂಬರ್​ ಒಬ್ಬ ಪ್ರೀತಿಸಿ ಮದುವೆಯಾದ ಒಂದೂವರೆ ತಿಂಗಳಿನಲ್ಲೇ ಆತನ ಪತ್ನಿ ಆತ್ಮಹತ್ಯಗೆ ಶರಣಾಗಿದ್ದಾಳೆ. ಇದೀಗ ಯೂಟ್ಯೂಬರ್​ನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಮುಂಬೈ ಮೂಲದ ಯೂಟ್ಯೂಬರ್​ ಜಿತೇಂದ್ರ ಅಗರ್​ವಾಲ್(26)​ ಕೋಮಲ್​ (23) ಹೆಸರಿನ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಏಪ್ರಿಲ್​ನಲ್ಲಿ ಮನೆ ಬಿಟ್ಟು ಓಡಿ ಹೋದ ಜೋಡಿ, ಏಪ್ರಿಲ್​ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಅದಾದ ನಂತರ ಸಂಸಾರದಲ್ಲಿ ಸಾಕಷ್ಟು ಜಗಳವೂ ಆಗಿದೆಯಂತೆ.
ಸಂಸಾರದಲ್ಲಿ ಸುಖ ಕಾಣದ ಕೋಮಲ್​ ಇತ್ತೀಚೆಗೆ ಮನೆಯ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಚಾರವಾಗಿ ಆಕೆಯ ತಾಯಿ ಮತ್ತು ಸಹೋದರಿ ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ದೂರು ನೀಡಿದ್ದಾರೆ. ಮಗಳಿಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡಿ ಆಕೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದೀಗ ಯುವತಿ ಮನೆಯವರು ನೀಡಿರುವ ದೂರಿದನ ಆಧಾರದಲ್ಲಿ ಜಿತೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಪ್ರಕರಣ ವಿಚಾರಣೆಯ ಹಂತದಲ್ಲಿದೆ. ಜಿತೇಂದ್ರ ಜೀತು ಜಾನ್​ ಹೆಸರಿನಲ್ಲಿ ಯೂಟ್ಯೂಬ್​ ಚಾನಲ್​ ಹೊಂದಿದ್ದು 2.8 ಲಕ್ಷಕ್ಕೂ ಅಧಿಕ ಸಬ್​ಸ್ಕ್ರೈಬರ್​ ಅನ್ನು ಹೊಂದಿದ್ದಾನೆ. (ಏಜೆನ್ಸೀಸ್)
ಉಡುಪಿಯ ಪರ್ಕಳದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸ್

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:seven − three =
Remember me
