ಪಶ್ಚಿಮ ಬಂಗಾಳ:ಲೋಕಸಭಾ ಚುನಾವಣೆ 2024ಕ್ಕೆ ಚುನಾವಣಾ ಅಖಾಡ ಭರದಿಂದ ಸಿದ್ಧಗೊಳ್ಳುತ್ತಿದ್ದು, ಇತರೆ ಪಕ್ಷಗಳು ಭರ್ಜರಿ ಪೈಪೋಟಿಗೆ ಸಕಲ ತಯಾರಿ ನಡೆಸುತ್ತಿದೆ. ಈ ಮಧ್ಯೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಕೃತಜ್ಞತೆ ಸಲ್ಲಿಸಿದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್, “ಸಂಸತ್ತಿನಲ್ಲಿ ಜನರ ಧ್ವನಿಯಾಗಲು ನನ್ನ ಮೇಲಿಟ್ಟ ನಂಬಿಕೆಗಾಗಿ ಧನ್ಯವಾದ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಸಾಧಕರಿಗೆ ಗೌರವದಿಂದ ಇತರರಿಗೆ ಪ್ರೇರಣೆ; ಮೈಮುನಾ- ಮರ್ಝಿನಾರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ವೈ.ಭರತ್ ಶೆಟ್ಟಿ
ಇಂದು ತೃಣಮೂಲ ಕಾಂಗ್ರೆಸ್ ಯೂಸುಫ್ ಪಠಾಣ್ ಅವರನ್ನು ಬಹರಂಪುರದಿಂದ ಲೋಕಸಭಾ ಅಭ್ಯರ್ಥಿಯಾಗಿ ಹೆಸರಿಸಿತು. ಈ ಬೆನ್ನಲ್ಲೇ ತನ್ನ ಎಕ್ಸ್​ (ಈ ಹಿಂದಿನ ಟ್ವಿಟರ್​) ಖಾತೆಯಲ್ಲಿ ಬರೆದುಕೊಂಡ ಪಠಾಣ್, “ನನ್ನನ್ನು ಟಿಎಂಸಿ ಕುಟುಂಬಕ್ಕೆ ಸ್ವಾಗತಿಸಿದ ಮತ್ತು ಸಂಸತ್ತಿನಲ್ಲಿ ಜನರ ಧ್ವನಿಯಾಗುವ ಜವಾಬ್ದಾರಿಯೊಂದಿಗೆ ನನ್ನನ್ನು ನಂಬಿದ್ದಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿಗೆ ನಾನು ಚಿರಋಣಿಯಾಗಿದ್ದೇನೆ” ಎಂದರು.
“ಜನರ ಪ್ರತಿನಿಧಿಗಳಾಗಿ, ಬಡವರು ಮತ್ತು ಮೂಲಭೂತ ಸೌಕರ್ಯಗಳಿಂದ ವಂಚಿತರಾದವರನ್ನು ಮೇಲಕ್ಕೆತ್ತುವುದು ನಮ್ಮ ಕರ್ತವ್ಯ ಮತ್ತು ಅದನ್ನೇ ನಾನು ಸಾಧಿಸಲು ಆಶಿಸುತ್ತೇನೆ” ಎಂದರು. ತಮ್ಮ ಸಹೋದರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ತಿಳಿಸಿದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್, “ನಿಮ್ಮ ತಾಳ್ಮೆ, ದಯೆ, ಅಗತ್ಯವಿರುವವರಿಗೆ ಸಹಾಯ ಮಾಡಿ ಮತ್ತು ದೊಡ್ಡ ಸ್ಥಾನವಿಲ್ಲದಿದ್ದರೂ ಜನರ ಸೇವೆಯನ್ನು ಸುಲಭವಾಗಿ ಗಮನಿಸಬಹುದು. ಒಮ್ಮೆ ನೀವು ರಾಜಕೀಯಕ್ಕೆ ಕಾಲಿಟ್ಟರೆ, ನೀವು ನಿಜವಾಗಿಯೂ ಜನರ ದೈನಂದಿನ ಜೀವನದಲ್ಲಿ ಒಂದು ಮಹತ್ವದ ಬದಲಾವಣೆಯನ್ನು ತರುತ್ತೀರಿ ಎಂದು ನನಗೆ ವಿಶ್ವಾಸವಿದೆ” ಎಂದಿದ್ದಾರೆ.
ಇದನ್ನೂ ಓದಿ:ಕಾಂತಾರ 2 ರಲ್ಲಿ ಜೂ.ಎನ್​ಟಿಆರ್​.. ಕನ್ನಡ- ತೆಲುಗು ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ!
ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಟಿಎಂಸಿ ಲೋಕಸಭೆ ಚುನಾವಣೆಗೆ 42 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಮೈದಾನದಲ್ಲಿ ಅಭ್ಯರ್ಥಿಗಳೊಂದಿಗೆ ಪರೇಡ್ ನಡೆಸುತ್ತಿದ್ದಂತೆ ತೃಣಮೂಲ ಸಂಸದ ಅಭಿಷೇಕ್ ಬ್ಯಾನರ್ಜಿ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದರು,(ಏಜೆನ್ಸೀಸ್).
ಹರಾಜಿನಲ್ಲಿ ಒಂದೇ ಒಂದು ನಿಂಬೆ ಹಣ್ಣಿಗೆ 35,000 ರೂ.! ಖರೀದಿ ಮಾಡಿದ ವ್ಯಕ್ತಿಯ ಖುಷಿ ಹೇಳತೀರದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − four =
Remember me
