ಅಮೃತಸರ:ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತೆ ಮಾಜಿ ಕ್ರಿಕೆಟಿಗರು ಹಾಗೂ ಚಿತ್ರ ನಟರು ರಾಷ್ಟ್ರೀಯ ಪಕ್ಷಗಳನ್ನು ಸೇರುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಸದ್ದು ಮಾಡಿದ್ದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿರುವ ಯುವರಾಜ್ ಸಿಂಗ್, ನನ್ನ ಮುಖ್ಯ ಉದ್ದೇಶ ಜನರಿಗೆ ಸಹಾಯ ಮಾಡುವುದಾಗಿದೆ. ನನ್ನ ಫೌಂಡೇಶನ್ ಮೂಲಕ ನಾನು ಅದನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.
Contrary to media reports, I'm not contesting elections from Gurdaspur. My passion lies in supporting and helping people in various capacities, and I will continue to do so through my foundation@YOUWECAN. Let's continue making a difference together to the best of our abilities❤️
ಇದನ್ನೂ ಓದಿ:ವಿರಾಟ್​ ಕೊಹ್ಲಿ ಹೆಸರಿನಲ್ಲಿದ್ದ ಅನಪೇಕ್ಷಿತ ದಾಖಲೆಯನ್ನು ಸರಿಗಟ್ಟಿದ ತಮೀಮ್​ ಇಕ್ಬಾಲ್
ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳ ಪ್ರಕಾರ ನಾನು ಗುರುದಾಸ್‌ಪುರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನ್ನ ಮುಖ್ಯ ಉದ್ದೇಶ ಜನರಿಗೆ ಸಹಾಯ ಮಾಡುವುದಾಗಿದೆ. ನನ್ನ ಫೌಂಡೇಶನ್ ಮೂಲಕ ನಾನು ಅದನ್ನು ಮುಂದುವರಿಸುತ್ತೇನೆ. ಹೀಗಾಗಿ ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನಾವು ಒಟ್ಟಿಗೆ ಕೆಲಸ ಮುಂದುವರಿಸೋಣ ಎಂದು ಹೇಳಿದ್ಧಾರೆ.
ಕೆಳೆದ ಕೆಲ ದಿನಗಳ ಹಿಂದೆ ಯುವರಾಜ್​ ಸಿಂಗ್ ಕುಟುಂಬಸ್ಥರನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಯುವರಾಜ್​ ಸಿಂಗ್​ ಬಿಜೆಪಿ ಸೇರ್ಪಡೆಯಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ವದಂತಿ ವ್ಯಾಪಕವಾಗಿ ಹರಿದಾಡಲು ಶುರು ಮಾಡಿತ್ತು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × one =
Remember me
