ಅತ್ತ ಇತ್ತ ಹರಿದಾಡುವ ಮನಸಿಗೆ
ಧ್ಯಾನದಲ್ಲಿ ಮನಸ್ಸನ್ನು ಕೇಂದ್ರಿಕರಿಸಲು ಬೋಧ:
ಅತ್ತ ಇತ್ತ ಹರಿದಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.||ಪಲ್ಲವಿ||
 
ಕಡುವಿಷಯದಿ ಸಂಸಾರಕೆ ಮರುಗುತ
ಪೊಡವಿ ತಳದಿ ಮಿಡಿಕ್ಯಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.||೧||
 
ಸಿರಿ ಸಂಪದ ಸೌಭಾಗ್ಯ ತನಗೆ ಬಲು
ಹಿರಿದಾಗಲಿಬೇಕೆಂಬುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.||೨||
 
ವಸುಧೆಯೊಳಗೆ ಶಿಶುನಾಳಾಧೀಶನ
ಹೆಸರು ಮರೆತು ಕೊಸರ್‍ಯಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.||೩||

ನೋಡಿ
ಶರೀಫ ಸಾಹಿತ್ಯ
ಉಲ್ಲೇಖ
ಶಿಶುನಾಳ ಶರೀಫರ ಪದಗಳು -ಅನಾಮಿಕ
ವರ್ಗ: ದಾಸ ಸಾಹಿತ್ಯವರ್ಗ:ಕನ್ನಡ ಸಾಹಿತ್ಯ