ಎಲ್ಲೋ ಹುಡುಕಿದೆ ಇಲ್ಲದ ದೇವರ
ಕಲ್ಲು ಮಣ್ಣುಗಳ ಗುಡಿಯೊಳಗೆ 
ಇಲ್ಲೇ ಇರುವ ಪ್ರೀತಿ ಸ್ನೇಹಗಳ 
ಗುರುತಿಸದಾದೆನು ನಮ್ಮೊಳಗೆ

ಎಲ್ಲಿದೆ ನಂದನ ಎಲ್ಲಿದೆ ಬಂಧನ 
ಎಲ್ಲಾ ಇವೆ ಈ ನಮ್ಮೊಳಗೆ 
ಒಳಗಿನ ತಿಳಿಯನು ಕಲಕದೆ ಇದ್ದರೆ 
ಅಮೃತದ ಸವಿಯಿದೆ ನಾಲಗೆಗೆ

ಹತ್ತಿರವಿದ್ದೂ ದೂರ ನಿಲ್ಲುವೆವು 
ನಮ್ಮ ಅಹಮ್ಮಿನ ಕೋಟೆಯಲಿ 
ಎಷ್ಟು ಕಷ್ಟವೋ ಹೊಂದಿಕೆ ಎಂಬುದು 
ನಾಲ್ಕು ದಿನದ ಈ ಬದುಕಿನಲಿ

ಕವಿ: ಜಿ ಎಸ್ ಶಿವರುದ್ರಪ್ಪ
ಸಂಗೀತ: ಸಿ ಅಶ್ವಥ್
ದ್ವನಿಸುರುಳಿ: ಚೈತ್ರ
ಗಾಯಕರು: ಸಿ ಅಶ್ವಥ್

ವರ್ಗ:ಜಿ ಎಸ್ ಶಿವರುದ್ರಪ್ಪ