ದಾಸದಾಸರ ಮನೆಯ ದಾಸಿಯರ ಮಗ ನಾನು
ದಾಸದಾಸರ ಮನೆಯ ದಾಸಿಯರ ಮಗ ನಾನು

ಸಾಸಿರ ನಾಮದೊಡೆಯ ರಂಗಯ್ಯನ ಮನೆಯ

ಶಂಕುದಾಸರ ಮನೆಯ ಮಂಕುದಾಸನು ನಾನು

ಮಂಕುದಾಸನು ನಾನು ಮರಳುದಾಸ|

ಸಂಕೀರ್ತನೆಯ ಮಾಡಿ ನೆನೆವ ಭಕ್ತರ ಮನೆಯ

ಬಿಂಕದಿ ಬಾಗಿಲ ಕಾಯ್ವ ಬಡದಾಸ ನಾನಯ್ಯ

ಕಾಳಿದಾಸರ ಮನೆಯ ಕೀಳುದಾಸನು ನಾನು

ಆಳು ದಾಸನು ನಾನು ಮೂಳ ದಾಸ|

ಫಾಲಾಕ್ಷಸಖ ನಿನ್ನ ಭಜಿಪ ಭಕ್ತರ ಮನೆಯ

ಆಳಿನಾಳಿನ ದಾಸನಡಿದಾಸ ನಾನಯ್ಯ

ಹಲವು ದಾಸರ ಮನೆಯ ಹೊಲೆಯ ದಾಸನು ನಾನು

ಕುಲವಿಲ್ಲದ ದಾಸ ಕುರುಬದಾಸ|

ಛಲದಿ ನಿನ್ನ ಭಜಿಸುವವರ ಮನೆಯ ಮಾದಿಗ ದಾಸ

ಸಲೆ ಮುಕ್ತಿ ಪಾಲಿಸೆನ್ನೊಡೆಯ ಕೇಶವನೆ||
ನೋಡಿ
ನೋಡಿ
ಕನಕದಾಸರ ಸಾಹಿತ್ಯ
       

ಉಲ್ಲೇಖ

Category:ಕನಕದಾಸ ಸಾಹಿತ್ಯ
Category:ದಾಸ ಸಾಹಿತ್ಯ