ನಾಯಿಮರಿ ನಾಯಿಮರಿ ತಿಂಡಿ ಬೇಕೆ
ತಿಂಡಿ ಬೇಕು ತೀರ್ಥ ಬೇಕು ಎಲ್ಲ ಬೇಕು

ನಾಯಿಮರಿ ನಿನಗೆ  ತಿಂಡಿ ಏಕೆ ಬೇಕು
ತಿಂದು ಗಟ್ಟಿಯಾಗಿ ಮನೆಯ ಕಾಯಬೇಕು

ನಾಯಿಮರಿ ಕಳ್ಳ ಬಂದರೇನು ಮಾಡುವೆ
ಕುಂಯಿ ಕುಂಯಿ ಬೌ ಎಂದು ಕೂಗಿ ಪಾಡುವೆ

ಜಾಣಮರಿ ತಾಳು ಹೋಗಿ ತಿಂಡಿ ತರುವೆನು
ತಾ ನಿನ್ನ ಮನೆಯ ನಾನು ಕಾಯುತಿರುವೆನು

ವರ್ಗ:ಶಿಶುಸಾಹಿತ್ಯ