ಹಳ್ಳಗಳ ದಂಡೆಯ ಮೇಲೆ ಸಾಧಾರಣ ಎತ್ತರದಲ್ಲಿ ಬೆಳೆಯುತ್ತದೆ. ಹಳ್ಳಿಗಳ ಸುತ್ತಮುತ್ತಲೂ ಕಾಣಬಹುದು. ದಪ್ಪ ಟೊಂಗೆ ಮತ್ತು ಬೊಡ್ಡೆಗಳ ಮೇಲೆ ಮಾರ್ಚ್, ಜುಲೈ ಅವಧಿಯಲ್ಲಿ ನೂರಾರು ಹಣ್ಣುಗಳಾಗುತ್ತವೆ. ಕುರಿ, ಆಡು, ದನಕರುಗಳಿಗೆ ಇದರ ಎಲೆಯನ್ನು ಮೇವಾಗಿ ತಿನ್ನಿಸುತ್ತಾರೆ. ಹರವಾಗಿ ಬೆಳೆಯುವುದರಿಂದ ಇದು ನೆರಳಿನ ಗಿಡ. ಇದರ ಕಟ್ಟಿಗೆಯಿಂದ ಪೆಟ್ಟಿಗೆ, ಹಲಗೆ, ಚಕ್ಕಡಿಗಳ ಹಲ್ಲು ಇತ್ಯಾದಿ ಮರಮುಟ್ಟುಗಳನ್ನು ತಯಾರಿಸುತ್ತಾರೆ. ಅರಗಿನ ಹುಳುವನ್ನು ಕೂಡ ಈ ಮರದ ಎಲೆಗಳ ಮೇಲೆ ಸಾಕುವರು.

ವರ್ಗ: ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ