ಯಾರೆ ರಂಗನ ಯಾರೆ ಕೃಷ್ಣನ
:ರಾಗ: ಶಂಕರಾಭರಣ;     ತಾಳ: ಆದಿ;

ಯಾರೆ ರಂಗನ ಯಾರೆ ಕೃಷ್ಣನ
ಯಾರೆ ರಂಗನ ಕರೆಯ ಬಂದವರು ||ಪಲ್ಲವಿ||

ಗೋಪಾಲಕೃಷ್ಣನ ಪಾಪವಿನಾಶನ
ಈ ಪರಿಯಿಂದಲಿ ಕರೆಯ ಬಂದವರು  ||೧ ||

ವೇಣುವಿನೋದನ ಪ್ರಾಣಪ್ರಿಯನ
ಜಾಣೆಯರರಸನ ಕರೆಯ ಬಂದವರು  || ೨ ||

ಕರಿರಾಜವರದನ ಪರಮಪುರುಷನ
ಪುರಂದರವಿಠಲನ ಕರೆಯ ಬಂದವರು  || ೩ ||ದಾಸವಾಣಿ
ರಚನೆ::ಪುರಂದರದಾಸರು

ನೋಡಿ
ಪುರಂದರದಾಸರ ಸಾಹಿತ್ಯ
ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಪುರಂದರದಾಸರು
ಪರಿವಿಡಿ

ಉಲ್ಲೇಖ
ವರ್ಗ: ಪುರಂದರದಾಸ ಸಾಹಿತ್ಯ
ವರ್ಗ: ದಾಸ ಸಾಹಿತ್ಯ