ಯಮನೆಲ್ಲೋ ಕಾಣೆನೆಂದ್ಹೇಳಬೇಡ
ರಾಗ: ಶಂಕರಾಭರಣ       ತಾಳ: ಆದಿ
ಯಮನೆಲ್ಲೋ ಕಾಣೆನೆಂದಹೇಳಬೇಡ
ಯಮನೆ ಶ್ರೀರಾಮನು ಸಂದೇಹ ಬೇಡ ||ಪ||

ನಂಬಿದ ವಿಭೀಷಣಗೆ ರಾಮನಾದ
ನಂಬದಿದ್ದ ರಾವಣಗೆ ಯಮನಾದ ||೧||

ನಂಬಿದ ಅರ್ಜುನನಿಗೆ ಭೃತ್ಯನಾದ
ನಂಬದ ದುರ್ಯೋಧನನಿಗೆ ಮೃತ್ಯುವಾದ ||೨||

ನಂಬಿದ ಪ್ರಹ್ಲಾದನಿಗೆ ಹರಿಯಾದ
ನಂಬದ ಹಿರಣ್ಯಕನಿಗೆ ಉರಿಯಾದ ||೩||

ನಂಬಿದ ಉಗ್ರಸೇನಗೆ ಮಿತ್ರನಾದ
ನಂಬದಿದ್ದ ಕಂಸನಿಗೆ ಶತ್ರುವಾದ ||೪||

ನಂಬಿಕೊಳ್ಳಿ ಬೇಗ ಶ್ರೀಕೃಷ್ಣದೇವನ
ಕಂಬು ಚಕ್ರಧಾರಿ ಪುರಂದರವಿಠಲನ ||೫||
 ರಚನೆ:- ಪುರಂದರದಾಸರು.ದಾಸವಾಣಿ

ನೋಡಿ
ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಪುರಂದರದಾಸರು
 ಪುರಂದರದಾಸರ ಸಾಹಿತ್ಯ
ಪರಿವಿಡಿ

ಉಲ್ಲೇಖ
ವರ್ಗ: ಪುರಂದರದಾಸ ಸಾಹಿತ್ಯ
ವರ್ಗ: ದಾಸ ಸಾಹಿತ್ಯ