: ಲಾಲ್ ಕೃಷ್ಣ ಅಡ್ವಾಣಿಯವರ ಆರೋಗ್ಯ ಹೇಗಿದೆ..? : ಜೂನ್ ತಿಂಗಳಿನಲ್ಲಿ ಎಲ್.ಕೆ.ಅಡ್ವಾಣಿಯವರು ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 27ರಂದು ಅವರನ್ನು ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಇಲ್ಲಿ , ಹೃದ್ರೋಗ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ತಜ್ಞರು ಅಡ್ವಾಣಿಯವರ ಸಮಗ್ರ ಆರೋಗ್ಯವನ್ನು ಪರೀಕ್ಷಿಸಿದ್ದರು. :ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಮಾಹಿತಿ ಪ್ರಕಾರ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಅವರು ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. ವಯೋಸಹಜಗಳಿಗೆ ತುತ್ತಾಗಿದ್ದ ಎಲ್.ಕೆ.ಅಡ್ವಾಣಿ ಅವರನ್ನು ಜುಲೈ 3ರ ಬುಧವಾರ ರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಾಜಿ ಉಪಪ್ರಧಾನಿ ಅವರನ್ನು ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಅಪೋಲೋ ಆಸ್ಪತ್ರೆಗೆ ಕರೆತರಲಾಯಿತು. ಈ ವೇಳೆ ಅವರ ಪುತ್ರಿ ಪ್ರತಿಭಾ ಅಡ್ವಾಣಿ ಜೊತೆಗಿದ್ದರು. ಇದನ್ನೂ ಓದಿ: ಬಳಿಕ ಜುಲೈ 4ರ ಗುರುವಾರ ಸಂಜೆ ವೇಳೆ ಅಡ್ವಾಣಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿತ್ತು. ಅಡ್ವಾಣಿಯವರ ಆರೋಗ್ಯದ ಬಗ್ಗೆ ಕುಟುಂಬಸ್ಥರೂ ಸಹ ಮಾಹಿತಿ ನೀಡಿದ್ದು, ಅವರು ಮನೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿಸಿದ್ದಾರೆ. , , . ( ) — (@) ಏಮ್ಸ್ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ಜೂನ್ ತಿಂಗಳಿನಲ್ಲಿ ಎಲ್.ಕೆ.ಅಡ್ವಾಣಿಯವರು ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 27ರಂದು ಅವರನ್ನು ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಇಲ್ಲಿ , ಹೃದ್ರೋಗ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ತಜ್ಞರು ಅಡ್ವಾಣಿಯವರ ಸಮಗ್ರ ಆರೋಗ್ಯವನ್ನು ಪರೀಕ್ಷಿಸಿದ್ದರು. ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಅಡ್ವಾಣಿಯವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದು ಏಮ್ಸ್ ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದನ್ನೂ ಓದಿ: ರಾಜಕೀಯ ಭೀಷ್ಮ! 1927 ನವೆಂಬರ್ 8ರಂದು ಅವಿಭಜಿತ ಭಾರತದ ಕರಾಚಿಯಲ್ಲಿ ಎಲ್‌.ಕೆ.ಅಡ್ವಾಣಿ ಜನಿಸಿದರು. ಭಾರತ ವಿಭಜನೆ ಬಳಿಕ ಅವರ ಕುಟುಂಬಸ್ಥರು ರಾಜಸ್ಥಾನಕ್ಕೆ ಆಗಮಿಸಿದ್ದರು. 1941ರಿಂದಲೇ RSSನಲ್ಲಿ ಕಾರ್ಯಕರ್ತರಾಗಿ ದುಡಿಯಲು ಆರಂಭಿಸಿದ್ದ ಅಡ್ವಾಣಿಯವರು, ಸ್ವಾತಂತ್ರ್ಯಾ ನಂತರ ಜನ ಸಂಘಕ್ಕೆ ಸೇರ್ಪಡೆಗೊಂಡು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. 1970ರಲ್ಲಿ ರಾಜ್ಯಸಭಾ ಸದಸ್ಯರಾಗುವ ಮೂಲಕ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸಿದ್ದರು. 1976ರಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯರಾಗಿದ್ದ ಅವಧಿಯಲ್ಲೇ ತುರ್ತು ಪರಿಸ್ಥಿತಿ ವಿರುದ್ಧ ಹಾಗೂ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದ ಅಡ್ವಾಣಿಯವರು, 1980ರಲ್ಲಿ ಹುಟ್ಟುಹಾಕಿದ್ದರು. 1990ರ ದಶಕದಲ್ಲಿರಾಮ ಮಂದಿರ ಹೋರಾಟದ ಮೂಲಕ ಅಡ್ವಾಣಿಯವರು ದೇಶದ ಗಮನ ಸೆಳೆದಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...