ಮಹಾ ಪ್ರಮಾದ! ಬದುಕಿದ್ದಾಗಲೇ ಅಡ್ವಾಣಿಯವರಿಗೆ ಶೃದ್ಧಾಂಜಲಿ ಸಲ್ಲಿಸಿದ ಕೇಂದ್ರ ಸಚಿವ ವಿ ಸೋಮಣ್ಣ : ಕೇಂದ್ರ ಸಚಿವ ವಿ.ಸೋಮಣ್ಣ ಎಡವಟ್ಟು ಮಾಡಿಕೊಂಡಿದ್ದು, ಬದುಕಿರುವ ಅಡ್ವಾಣಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಆಯೋಜನೆಗೊಂಡಿದ್ದ ಅಭಿನಂದನಾ ಸಭೆಯಲ್ಲಿ ಸೋಮಣ್ಣ ಶೃದ್ಧಾಂಜಲಿ ಸಲ್ಲಿಸಿದ್ದಾರೆ. ತುಮಕೂರು:ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿಯವರು ಇತ್ತೀಚೆಗೆಯಷ್ಟೇ ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಕೇಂದ್ರ ಸಚಿವ ವಿ.ಸೋಮಣ್ಣ ಎಡವಟ್ಟು ಮಾಡಿಕೊಂಡಿದ್ದು, ಬದುಕಿರುವ ಅಡ್ವಾಣಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಆಯೋಜನೆಗೊಂಡಿದ್ದ ಅಭಿನಂದನಾ ಸಭೆಯಲ್ಲಿ ಸೋಮಣ್ಣ ಶೃದ್ಧಾಂಜಲಿ ಸಲ್ಲಿಸಿದ್ದಾರೆ. ಇದನ್ನೂ ಓದಿ: “ಇದೀಗ ತಾನೇ ಮಾಹಿತಿ ಬಂದಿದೆ, ಅಡ್ವಾಣಿಯವರು ಸಾವನ್ನಪ್ಪಿದ್ದಾರೆ. ನಾನು ದೆಹಲಿಗೆ ಹೋಗಬೇಕಿದೆ. ಎಲ್ಲರೂ ಎದ್ದು ನಿಂತು ಮೌನಾಚರಣೆ ಮಾಡಿ” ಎಂದು ಬಹಿರಂಗ ಸಭೆಯಲ್ಲಿ ಸೋಮಣ್ಣ ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಜನಸಮೂಹ ಮಾತ್ರವಲ್ಲದೆ, ಗುಬ್ಬಿಯ ಬಿಜೆಪಿ-ಜೆಡಿಎಸ್ ಮುಖಂಡರು ಮೌನಾಚರಣೆ ಮಾಡಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...