: ಹೆಣಗಳ ರಾಶಿ ನೋಡಿ ಪೊಲೀಸ್‌ ಕಾನ್ಸ್‌ಟೇಬಲ್‌ಗೆ ಹೃದಯಾಘಾತ! : ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಹೆಣಗಳ ರಾಶಿಗಳನ್ನು ನೋಡಿ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. :ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಮುಘಲ್‌ಗರ್ಹಿ ಗ್ರಾಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿ ಈ ದುರ್ಘಟನೆ ನಡೆದಿತ್ತು. ಯಲ್ಲಿ ಮಕ್ಕಳು ಸೇರಿದಂತೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಹೆಣಗಳ ರಾಶಿಗಳನ್ನು ನೋಡಿ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರಜನೀಶ್‌ ಎಂಬ ಪೊಲೀಸ್‌ ಕಾನ್ಸ್‌ಟೇಬಲ್‌ ಹೃದಯಾಘಾತಕ್ಕೆ ಬಲಿಯಾದವರು. ರಜನೀಶ್‌ ಅವರನ್ನು ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಭದ್ರತೆಗೆ ನಿಯೋಜಿಸಲಾಗಿತ್ತು. ಇದೇ ಆಸ್ಪತ್ರೆಯಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳ ರಾಶಿ ಹಾಕಲಾಗಿತ್ತು. ಅದನ್ನು ನೋಡುತ್ತಿದ್ದಂತೆ ಅವರಿಗೆ ಹೃದಯಾಘಾತವಾಗಿದ್ದು, ಕುಸಿದುಬಿದ್ದು ಅಲ್ಲೇ ಸಾವನ್ನಪ್ಪಿದ್ದಾರೆ. ಅವರು ಅವಘರ್‌ನಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ () ಭಾಗವಾಗಿದ್ದು, ತುರ್ತು ಕರ್ತವ್ಯಕ್ಕಾಗಿ ಅವರನ್ನು ಆಸ್ಪತ್ರೆಗೆ ಕರೆಸಲಾಗಿತ್ತು. ಆದರೆ ಮೃತದೇಹಗಳ ರಾಶಿ ಕಂಡ ಅವರಿಗೆ ಆಘಾತವಾಗಿತ್ತು. ಹೀಗಾಗಿ ಹಠಾತ್‌ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ್‌ ಅವರು ಉನ್ನತಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...