ಉತ್ತರಪ್ರದೇಶದ ಹತ್ರಾಸದ ಸತ್ಸಂಗ ಸಮಾರಂಭದಲ್ಲಿ ಕಾಲ್ತುಳಿತ : 27 ಮಂದಿ ಸಾವು ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ನೂಕುನುಗ್ಗಲು ಉಂಟಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.ಪ್ರವಚನದಲ್ಲಿ ಪಾಲ್ಗೊಳ್ಳಲು ಬಂದಿದ್ದ ನೂರಾರು ಭಕ್ತರು ಬಿಸಿಲಿನ ತಾಪಕ್ಕೆ ಮೂರ್ಛೆ ಹೋಗಿದ್ದಾರೆ. ಉತ್ತರಪ್ರದೇಶ :ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ಭೀಕರ ಅವಘಡ ಸಂಭವಿಸಿದೆ.ರತಿಭಾನ್‌ಪುರದ ಸತ್ಸಂಗದ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತದಿಂದ 27 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 25 ಮಹಿಳೆಯರು ಮತ್ತು 2 ಪುರುಷರು ಸೇರಿದ್ದಾರೆ ಎನ್ನಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಕ್ರಮದ ವೇಳೆ ನೂಕುನುಗ್ಗಲು ಉಂಟಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.ಪ್ರವಚನದಲ್ಲಿ ಪಾಲ್ಗೊಳ್ಳಲು ಬಂದಿದ್ದ ನೂರಾರು ಭಕ್ತರು ಬಿಸಿಲಿನ ತಾಪಕ್ಕೆ ಮೂರ್ಛೆ ಹೋಗಿದ್ದಾರೆ. ಮಾಹಿತಿ ಪಡೆದ ಪೊಲೀಸರು ಮತ್ತು ಆಡಳಿತ ಮಂಡಳಿ ನೂರಾರು ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ : ಪ್ರತ್ಯಕ್ಷದರ್ಶಿ ಹೇಳಿದ್ದೇನು ? :"ನಾವು ಸತ್ಸಂಗಕ್ಕೆ ಹೋಗಿದ್ದೆವು,ಅಲ್ಲಿ ಸಾಕಷ್ಟು ಜನ ಸೇರಿದ್ದರು. ರಸ್ತೆ ಸಂಪೂರ್ಣವಾಗಿ ಜಾಮ್ ಆಗಿತ್ತು.ಹೊರಗೆ ಹೋಗಲು ಸ್ಥಳವಿರಲಿಲ್ಲ. ಆದರೆ ಜನದಟ್ಟಣೆ ಹೆಚ್ಚಾಗುತಿದ್ದ ಹಾಗೆ ನಾನು ಮತ್ತು ನನ್ನ ತಾಯಿ ಅಲ್ಲಿಂದ ಹೊರಟೆವು.ಜಾಗದ ಕೊರತೆಯಿಂದಾಗಿ, ಜನಹೊರಬರಲು ಪ್ರಯತ್ನಿಸುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿ ಜ್ಯೋತಿ ಎನ್ನುವವರು ತಿಳಿಸಿದ್ದಾರೆ. 27 ಮಂದಿ ಮೃತಪಟ್ಟಿರುವುದನ್ನು ದೃಢಪಡಿಸಿದ ಸರ್ಕಾರ :ಸತ್ಸಂಗದ ವೇಳೆ ನಡೆದ ಅಪಘಾತದಲ್ಲಿ 27 ಮಂದಿ ಮೃತಪಟ್ಟಿದ್ದಾರೆ ಎನ್ನುವುದನ್ನು ಸಿಎಂಒ ಎತಾಹ್ ದೃಢಪಡಿಸಿದ್ದಾರೆ.ಅಲ್ಲದೆ ಮೃತರ ಮರಣೋತ್ತರ ಪರೀಕ್ಷೆ ನಡೆಸುವುದಾಗಿಯೂ ಹೇಳಿದೆ. ಇದನ್ನೂ ಓದಿ : ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...