ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅರ್ನಾಬ್ ಕುಮಾರ್ ಚೌಧುರಿ ನೇಮಕ : ಭಾರತೀಯ ರಿಸರ್ವ್ ಬ್ಯಾಂಕ್ ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅರ್ನಾಬ್ ಕುಮಾರ್ ಚೌಧರಿ ಅವರನ್ನು ನೇಮಿಸಲಾಗಿದ್ದು, ಸೋಮವಾರ ಪ್ರಕಟಿಸಿದೆ. :ಭಾರತೀಯ ರಿಸರ್ವ್ ಬ್ಯಾಂಕ್ ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅರ್ನಾಬ್ ಕುಮಾರ್ ಚೌಧರಿ ಅವರನ್ನು ನೇಮಿಸಲಾಗಿದ್ದು, ಜುಲೈ 1, 2024 ಸೋಮವಾರ ಪ್ರಕಟಿಸಿದೆ. ಜೂನ್ 3, 2024 ರಿಂದ ಅರ್ನಾಬ್ ಕುಮಾರ್ ಚೌಧರಿ ಅಧಿಕಾರವು ಜಾರಿಯಲಿದ್ದರೆ, ಸಾರ್ವಜನಿಕ ಪ್ರಕಟಣೆಯನ್ನು ಜುಲೈ 1, 2024 ರಂದು ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನು ಓದಿ : ಇದಕ್ಕೂ ಮೊದಲು ಮೇಲ್ವಿಚಾರಣಾ ಇಲಾಖೆಯಲ್ಲಿ ಮುಖ್ಯ ಜನರಲ್ ಮ್ಯಾನೇಜರ್-ಇನ್-ಚಾರ್ಜ್ ಆಗಿ ಸೇವೆ ಸಲ್ಲಿಸುತ್ತಿದ್ದರು ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಮೂರು ದಶಕಗಳಿಗೂ ಹೆಚ್ಚು ಅನುಭವವನ್ನು ಹೊಂದಿರುವ ಚೌಧರಿ ಅವರು ಇದೀಗ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಅದಲ್ಲದೆ ಕಾರ್ಪೊರೇಟ್ ತಂತ್ರಗಾರಿಕೆ, ಬಜೆಟ್, ಲೆಕ್ಕಪತ್ರ ನಿರ್ವಹಣೆ ಮತ್ತು ಸಂಚಿಕೆ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ. ಹಲವಾರು ಸಮಿತಿಗಳು ಮತ್ತು ಕಾರ್ಯ ಗುಂಪುಗಳ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ ಮತ್ತು ನೀತಿ ನಿರೂಪಣೆಗೆ ಕೊಡುಗೆ ನೀಡುತ್ತಿದ್ದಾರೆ. ಇದನ್ನು ಓದಿ : ಅರ್ನಾಬ್ ಕುಮಾರ್ ಚೌಧರಿ ಅವರು ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದು, ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಮತ್ತು ಫೈನಾನ್ಸ್‌ನ ಪ್ರಮಾಣೀಕೃತ ಸಹವರ್ತಿ ಆಗಿದ್ದು, ಕಾರ್ಯನಿರ್ವಾಹಕ ನಿರ್ದೇಶಕರಾಗಿ, ಚೌಧರಿ ಅವರು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್, ವಿದೇಶಿ ವಿನಿಮಯ ಇಲಾಖೆ ಮತ್ತು ಅಂತರರಾಷ್ಟ್ರೀಯ ಇಲಾಖೆಯನ್ನು ನೋಡಿಕೊಳ್ಳುತ್ತಾರೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...