ಪುಣೆಯಲ್ಲಿ ಝಿಕಾ ವೈರಸ್ ಪತ್ತೆ, ವೈದ್ಯ ಹಾಗೂ ಮಗಳಿಗೆ ಪಾಸಿಟಿವ್ : ವೈದ್ಯ ಹಾಗೂ ಮಗಳಿಗೆ ಝಿಕಾ ವೈರಸ್ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. :ವೃತ್ತಿಯಲ್ಲಿ ವೈದ್ಯರಾಗಿರುವ ವ್ಯಕ್ತಿಗೆ ಮತ್ತು ಅವರ ಮಗಳಿಗೆ ಝಿಕಾ ವೈರಸ್ ಪತ್ತೆಯಾಗಿರುವುದು ದೃಢಪಟ್ಟಿದೆ. 46 ವರ್ಷದ ವೈದ್ಯ ಹಾಗೂ ಅವರ ಹದಿಹರೆಯದ ಮಗಳಿಗೆ ಝಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಬುಧವಾರ ತಿಳಿಸಿದ್ದಾರೆ. ಇದನ್ನು ಓದಿ : ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಬಳಿಕ ರಕ್ತದ ಮಾದರಿಗಳನ್ನು ಪರೀಕ್ಷೆಗೆ ನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಕಳಿಸಿಲಾಗಿತ್ತು. ರಕ್ತದ ಮಾದರಿ ಪರೀಕ್ಷೆಯ ವರದಿಯು ಜೂನ್ 21ರಂದು ಬಂದಿದ್ದು, ಝಿಕಾ ವೈರಸ್ ಪತ್ತೆಯಾಗಿದೆ ಎಂದು ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ. ಇದನ್ನು ಓದಿ : ವೈದ್ಯನಲ್ಲಿ ಝಿಕಾ ವೈರಸ್ ಪತ್ತೆಯಾದ ನಂತರ ಕುಟುಂಬದಲ್ಲಿರುವ ಐದು ಜನರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ ಅವರ 15 ವರ್ಷದ ಮಗಳಿಗೆ ಝಿಕಾ ವೈರಸ್ ಪಾಸಿಟಿವ್ ಬಂದಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...