: ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ : ಕಾಂಗ್ರೆಸ್ ಅಭ್ಯರ್ಥಿ ಕೆ.ಸುರೇಶ್ ವಿರುದ್ಧ ಓಂ ಬಿರ್ಲಾ ಸ್ಪೀಕರ್‌ ಸ್ಪರ್ಧೆಯಲ್ಲಿ ಗೆಲುವು ದಾಖಲಿಸಿದ್ದಾರೆ. ನವದೆಹಲಿ:ಓಂ ಬಿರ್ಲಾ ಮತ್ತೊಮ್ಮೆ ಲೋಕಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಯಾದರು. ಕಾಂಗ್ರೆಸ್ ಅಭ್ಯರ್ಥಿ ಕೆ.ಸುರೇಶ್ ವಿರುದ್ಧ ಓಂ ಬಿರ್ಲಾ ಸ್ಪೀಕರ್‌ ಸ್ಪರ್ಧೆಯಲ್ಲಿ ಗೆಲುವು ದಾಖಲಿಸಿದ್ದಾರೆ. ಓಂ ಬಿರ್ಲಾ ಅವರು ಧ್ವನಿ ಮತದ ಮೂಲಕ ಸ್ಪೀಕರ್ ಆಗಿ ಆಯ್ಕೆಯಾದರು. ಲೋಕಸಭೆಯ ಮೂರನೇ ದಿನದ ಕಲಾಪ ಬುಧವಾರ ಆರಂಭವಾಯಿತು. ಇದನ್ನೂ ಓದಿ: ಮೊದಲು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಪ್ರಸ್ತಾಪಿಸುವ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಎನ್‌ಡಿಎ ಸಂಸದರು ಬೆಂಬಲಿಸಿದರು. ಇನ್ನೊಂದೆಡೆ ಇಂಡಿಯಾ ಅಲಯನ್ಸ್ ಪರವಾಗಿ ಕೆ.ಸುರೇಶ್ ಹೆಸರು ಪ್ರಸ್ತಾಪವಾಯಿತು. ಇದರೊಂದಿಗೆ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಆರಂಭವಾಯಿತು. ಸಂಸದರು ಧ್ವನಿ ಮತದ ಮೂಲಕ ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದರು. 18ನೇ ಲೋಕಸಭೆಯ ಸ್ಪೀಕರ್ ಹುದ್ದೆಗೆ ಓಂ ಬಿರ್ಲಾ ಅವರನ್ನು ಎನ್‌ಡಿಎ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಾಗಿದ್ದ ಅವರು 17 ನೇ ಲೋಕಸಭೆಯಲ್ಲಿ ಸಹ ಸ್ಪೀಕರ್ ಹುದ್ದೆಯನ್ನು ಅಲಂಕರಿಸಿದ್ದರು. ರಾಜಸ್ಥಾನದ ಕೋಟಾ ಬುಂಡಿ ಕ್ಷೇತ್ರದಿಂದ ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾದರು. ಲೋಕಸಭಾ ಸ್ಪೀಕರ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಓಮ ಬಿರ್ಲಾ ಹೊಸ ಇತಿಹಾಸ ನಿರ್ಮಿಸಿದರು. ಇದುವರೆಗೆ ದೇಶದ ಇತಿಹಾಸದಲ್ಲಿ ಸತತ ಎರಡು ಬಾರಿ ಸ್ಪೀಕರ್ ಆಗಿ ಆಯ್ಕೆಯಾದ ಗೌರವಕ್ಕೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...