: 'ಗಡಿನಾಡ ಗಾಂಧಿ' ಎಂದು ಯಾರನ್ನು ಕರೆಯುತ್ತಾರೆ? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಭಾರತದ ಮೊದಲ ರಾಷ್ಟ್ರಪತಿ ಯಾರು? ಉತ್ತರ: ಡಾ. ಬಾಬು ರಾಜೇಂದ್ರ ಪ್ರಸಾದ್ ಪ್ರಶ್ನೆ 2:ಭಾರತೀಯ ಸಂವಿಧಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಉತ್ತರ: ಡಾ.ಬಿ.ಆರ್.ಅಂಬೇಡ್ಕರ್ ಪ್ರಶ್ನೆ 3:ಭಾರತದ ರಾಷ್ಟ್ರೀಯ ವೃಕ್ಷ ಯಾವುದು..? ಉತ್ತರ: ಆಲದ ಮರ ಪ್ರಶ್ನೆ 4:ಭಾರತದ ಅತಿ ಎತ್ತರದ ಅಣೆಕಟ್ಟು ಯಾವುದು..? ಉತ್ತರ: ಉತ್ತರಾಖಂಡದ ತೆಹ್ರಿ ಅಣೆಕಟ್ಟು ಪ್ರಶ್ನೆ 5:ಭಾರತದ ಅತ್ಯಂತ ಚಿಕ್ಕ ರಾಜ್ಯ ಯಾವುದು..? ಉತ್ತರ: ಗೋವಾ ಇದನ್ನೂ ಓದಿ: ಪ್ರಶ್ನೆ 6:ಸ್ಟ್ಯಾಚ್ಯೂ ಆಫ್ ಲಿಬರ್ಟಿ ಯಾವ ನಗರದಲ್ಲಿದೆ? ಉತ್ತರ: ಅಮೆರಿಕದ ನ್ಯೂಯಾರ್ಕ್ ಪ್ರಶ್ನೆ 7:ಭಾರತವು ಇದುವರೆಗೆ ಎಷ್ಟು ಐಸಿಸಿ ಏಕದಿನ ವಿಶ್ವಕಪ್‌ ಟ್ರೋಫಿ ಗೆದ್ದಿದೆ? ಉತ್ತರ: ಎರಡು ಬಾರಿ ಪ್ರಶ್ನೆ 8:ಹುತಾತ್ಮರ ದಿನವನ್ನು ಪ್ರತಿ ವರ್ಷ ಯಾವಾಗ ಆಚರಿಸಲಾಗುತ್ತದೆ? ಉತ್ತರ: 30 ಜನವರಿ ಪ್ರಶ್ನೆ 9:ಯಾವ ದೇಶದಲ್ಲಿ ಮೊದಲ ದಿಕ್ಸೂಚಿಯನ್ನು ಕಂಡುಹಿಡಿಯಲಾಯಿತು? ಉತ್ತರ: ಚೀನಾ ಪ್ರಶ್ನೆ 10:'ಗಡಿನಾಡ ಗಾಂಧಿ' ಎಂದು ಯಾರನ್ನು ಕರೆಯುತ್ತಾರೆ? ಉತ್ತರ: ಖಾನ್ ಅಬ್ದುಲ್ ಗಫಾರ್ ಖಾನ್ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...