ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ 56ರ ವ್ಯಕ್ತಿಯ ಮೂಗು ಮುರಿಯವಂತೆ ಹೊಡೆದ ತಾಯಿ..! ರಾಧಾಕೃಷ್ಣ ಪಿಳ್ಳೈ ಅವರು ಶಾಲೆಯಿಂದ ಮನೆಗೆ ಬಸ್‌ನಲ್ಲಿ ಹಿಂದಿರುಗುತ್ತಿದ್ದ 17 ವರ್ಷದ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ನಂತರ ಮಗು ಜಂಕ್ಷನ್‌ನಲ್ಲಿ ಬಸ್‌ನಿಂದ ಇಳಿದು ತಾಯಿಗೆ ತಿಳಿಸಿದೆ... ಆಗ .. ಮುಂದೆನಾಯ್ತು.. :ತನ್ನ 17 ವರ್ಷದ ಮಗಳೊಂದಿಗೆ ಅನುಚಿತವಾಗಿ ವರ್ತಿಸಿದ 56 ವರ್ಷದ ವ್ಯಕ್ತಿಯೊಬ್ಬರ ಮುಖಕ್ಕೆ ತಾಯಿ ಕಪಾಳಮೋಕ್ಷ ಮಾಡಿರುವ ಘಟನೆ, ಕೇರಳದ ಪತ್ತನಂತಿಟ್ಟದಲ್ಲಿ ನಡೆದಿದೆ. ಅಡೂರ್ ಮುಂಡಪಲ್ಲಿ ಮೂಲದ ರಾಧಾಕೃಷ್ಣ ಪಿಳ್ಳೈ ಎಂಬುವವರಿಗೆ ಥಳಿಸಲಾಗಿದೆ. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಪತ್ತನಂತಿಟ್ಟದ ನೆಲ್ಲಿಲಿಮ್ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ರಾಧಾಕೃಷ್ಣ ಪಿಳ್ಳೈ ಅವರು ಶಾಲೆಯಿಂದ ಮನೆಗೆ ಬಸ್‌ನಲ್ಲಿ ಹಿಂದಿರುಗುತ್ತಿದ್ದ 17 ವರ್ಷದ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ನಂತರ ಮಗು ಜಂಕ್ಷನ್‌ನಲ್ಲಿ ಬಸ್‌ನಿಂದ ಇಳಿದು ತಾಯಿಗೆ ತಿಳಿಸಿದೆ. ಇದನ್ನೂ ಓದಿ: ಬಾಲಕಿಯ ತಾಯಿ ಕೂಡಲೇ ಸ್ಥಳಕ್ಕಾಗಮಿಸಿ ಸಮೀಪದ ಅಂಗಡಿಯಲ್ಲಿ ನಿಂತಿದ್ದ ರಾಧಾಕೃಷ್ಣನನ್ನು ವಿಚಾರಿಸಿದ್ದಾರೆ. ಈ ವೇಳೆ ಅವರ ಬಳಿಯೂ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಈ ವೇಳೆ ಮಹಿಳೆ ವ್ಯಕ್ತಿಯ ಮುಖಕ್ಕೆ ಹೊಡೆದಿದ್ದಾಳೆ.. ಇದರಿಂದಾಗಿ ರಾಧಾಕೃಷ್ಣನ್ ಅವರ ಮೂಗು ಮುರಿದು ರಕ್ತ ಸುರಿಯಿತು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ವ್ಯಕ್ತಿಯನ್ನು ವಶಕ್ಕೆ ಪಡೆದು ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ವಿಚಿತ್ರ ಅಂದ್ರೆ, ರಾಧಾಕೃಷ್ಣನ್ ಮೇಲೆ ಹಲ್ಲೆ ನಡೆಸಿದ ಮಹಿಳೆಯ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...