ಪ್ರಧಾನಿ ಮೋದಿ ಉಕ್ರೇನ್ ಯುದ್ದವನ್ನು ನಿಲ್ಲಿಸಬಹುದಾದರೆ ಪೇಪರ್ ಸೋರಿಕೆ ತಡೆಯಲಾಗುತ್ತಿಲ್ಲವೇಕೆ?-ರಾಹುಲ್ ಗಾಂಧಿ ರಾಹುಲ್ ಗಾಂಧಿಯವರ ಈ ಹೇಳಿಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಜೂನ್ 18 ರಂದು ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಬುಧವಾರದಂದು ಪರೀಕ್ಷೆಯನ್ನು ರದ್ದುಗೊಳಿಸಿ ಈಗ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ. ನವದೆಹಲಿ:ಯುಜಿಸಿ-ನೆಟ್ ರದ್ದತಿ ಮತ್ತು ನೀಟ್ ವಿವಾದದ ವಿಚಾರವಾಗಿ ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಹುಲ್ ಗಾಂಧಿ 'ಮೋದಿ ಜಿ ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ.ಆದರೆ ಕೆಲವು ಕಾರಣಗಳಿಂದ ನರೇಂದ್ರ ಮೋದಿಯವರು ಭಾರತದಲ್ಲಿ ಪೇಪರ್ ಸೋರಿಕೆಯನ್ನು ನಿಲ್ಲಿಸಲು ಸಾಧ್ಯವಾಗಿಲ್ಲ ಅಥವಾ ನಿಲ್ಲಿಸಲು ಬಯಸುವುದಿಲ್ಲ' ಎಂದು ಅವರು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಯವರ ಈ ಹೇಳಿಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಜೂನ್ 18 ರಂದು ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಬುಧವಾರದಂದು ಪರೀಕ್ಷೆಯನ್ನು ರದ್ದುಗೊಳಿಸಿ ಈಗ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ. ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯನ್ನು ಬಿಜೆಪಿಯ ಮಾತೃಸಂಸ್ಥೆ ವಶಪಡಿಸಿಕೊಂಡಿರುವುದರಿಂದ ಪತ್ರಿಕೆ ಸೋರಿಕೆಯಾಗುತ್ತಿದೆ.ವಿಶ್ವವಿದ್ಯಾನಿಲಯದ ಉಪಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿಲ್ಲ ಆದರೆ "ನಿರ್ದಿಷ್ಟ ಸಂಸ್ಥೆಯೊಂದಿಗೆ ಅವರ ಸಂಪರ್ಕದ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...