ಯುಜಿಸಿ-ನೆಟ್ ಪರೀಕ್ಷೆಯ ಪತ್ರಿಕೆ ಸೋರಿಕೆ, ಸಮಗ್ರ ತನಿಖೆಗಾಗಿ ಸಿಬಿಐಗೆ ಪ್ರಕರಣ ಹಸ್ತಾಂತರ ಪರೀಕ್ಷಾ ಪ್ರಕ್ರಿಯೆಯ ಅತ್ಯುನ್ನತ ಮಟ್ಟದ ಪಾರದರ್ಶಕತೆ ಮತ್ತು ಪಾವಿತ್ರ್ಯತೆಯನ್ನು ಖಚಿತಪಡಿಸಿಕೊಳ್ಳಲು ಜೂನ್ 2024 ರ ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಘೋಷಿಸುತ್ತಿದೆ ಮತ್ತು ಅದನ್ನು ನಂತರ ಹಂಚಿಕೊಳ್ಳಲಾಗುವ ದಿನಾಂಕದಂದು ಹೊಸದಾಗಿ ನಡೆಸಲಾಗುವುದು ಎಂದು ಸಚಿವಾಲಯ ಹೇಳಿದೆ. ನವದೆಹಲಿ:ಯುಜಿಸಿ ನೆಟ್ ಪರೀಕ್ಷೆಯ ಪೇಪರ್ ಗಳು ಸೋರಿಕೆಯಾದ ಹಿನ್ನಲೆಯಲ್ಲಿ ಈ ವಿಷಯವನ್ನು ಸಮಗ್ರ ತನಿಖೆಗಾಗಿ ಶಿಕ್ಷಣ ಸಚಿವಾಲಯವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಿದೆ. ಗೃಹ ಸಚಿವಾಲಯದ ಅಡಿಯಲ್ಲಿನ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯೂನಿಟ್‌ನಿಂದ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸ್ವೀಕರಿಸಿದ ಮಾಹಿತಿಯನ್ನು ಆಧಾರಿಸಿ ಈಗ ಶಿಕ್ಷಣ ಸಚಿವಾಲಯ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಪಡಿಸಿದೆ. ಇದನ್ನೂ ಓದಿ: ಈಗ ಕುರಿತಾಗಿ ಮಾತನಾಡಿದ ಶಿಕ್ಷಣ ಸಚಿವಾಲಯದ ಅಧಿಕಾರಿಯೊಬ್ಬರು ಮಾತನಾಡಿ 'ಪರೀಕ್ಷೆಗಳ ಪಾವಿತ್ರ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರವು ಬದ್ಧವಾಗಿದೆ.ಈ ವಿಷಯದಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಭಾಗಿಯಾಗಿದ್ದರೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ' ಎಂದು ಅಧಿಕಾರಿ ಹೇಳಿದರು. ಇದನ್ನೂ ಓದಿ: 19ನೇ ಜೂನ್, 2024 ರಂದು, ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿದ (I4C) ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಘಟಕದಿಂದ ಯುಜಿಸಿ ಪರೀಕ್ಷೆಯಲ್ಲಿನ ಕೆಲವು ಮಾಹಿತಿಗಳನ್ನು ಸ್ವೀಕರಿಸಿದೆ.ಈ ಮಾಹಿತಿಯು ಪರೀಕ್ಷೆಯ ಸಮಗ್ರತೆಯಲ್ಲಿ ರಾಜಿಯಾಗಿರಬಹುದು ಎಂದು ಹೇಳಿದೆ. ಪರೀಕ್ಷಾ ಪ್ರಕ್ರಿಯೆಯ ಅತ್ಯುನ್ನತ ಮಟ್ಟದ ಪಾರದರ್ಶಕತೆ ಮತ್ತು ಪಾವಿತ್ರ್ಯತೆಯನ್ನು ಖಚಿತಪಡಿಸಿಕೊಳ್ಳಲು ಜೂನ್ 2024 ರ ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಘೋಷಿಸುತ್ತಿದೆ ಮತ್ತು ಅದನ್ನು ನಂತರ ಹಂಚಿಕೊಳ್ಳಲಾಗುವ ದಿನಾಂಕದಂದು ಹೊಸದಾಗಿ ನಡೆಸಲಾಗುವುದು ಎಂದು ಸಚಿವಾಲಯ ಹೇಳಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...