: ಬೆಂಗಳೂರು-ಪಂಢರಾಪುರ ನಡುವೆ ವಿಶೇಷ ರೈಲು ಸಂಚಾರ : ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಾಪುರ ರೈಲು ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ಆರಂಭಿಸಲಾಗಿದೆ. :ನೈಋತ್ಯ ರೈಲ್ವೆಯಿಂದ ಪಂಢರಪುರದ ವಿಠ್ಠಲನ ದರ್ಶನ ಮಾಡುವ ಭಕ್ತರಿಗೆ ಗುಡ್‌ ನ್ಯೂಸ್‌ ನೀಡಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಾಪುರ ರೈಲು ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ಆರಂಭಿಸಲಾಗಿದೆ. ಇಂದು ಅಂದರೆ ಜುಲೈ 1, 3, 6ರಂದು ರಾತ್ರಿ 10 ಗಂಟೆಗೆ ಬೆಂಗಳೂರಿನಿಂದ ಹೊರಡುವ ಈಮರುದಿನ ಸಂಜೆ 6.20ಕ್ಕೆ ಪಂಢರಾಪುರವನ್ನು ತಲುಪಲಿದೆ. ಇದನ್ನೂ ಓದಿ: ಇದೇ ರೈಲು ಜುಲೈ 2, 4 7ರಂದು ಪಂಢರಾಪುರದಿಂದ ರಾತ್ರಿ 8 ಗಂಟೆಗೆ ಹೊರಟು ಮರುದಿನ ಮಧ್ಯಾಹ್ನ 12:30ಕ್ಕೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ತಲುಪಲಿದೆ. ಭಕ್ತರ ಹಿತದೃಷ್ಟಿಯಿಂದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಪಂಢರಾಪುರ ನಿಲ್ದಾಣಗಳ ನಡುವೆ ಈ ವಿಶೇಷ ಎಕ್ಸ್‌ಪ್ರೆಸ್‌ ರೈಲಿನವನ್ನು ಆರಂಭಿಸಲಾಗುತ್ತಿದೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...