ಕೇರಳ ಗುಡ್ಡ ಕುಸಿತ ; ಕನ್ನಡಿಗರ ರಕ್ಷಣೆಗೆ ತೆರಳಿದ ಸಚಿವ ಸಂತೋಷ್ ಲಾಡ್ : ಕೇರಳದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರು ತೆರಳಿದ್ದಾರೆ‌. :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. ಇದನ್ನೂ ಓದಿ- ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ( ) ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಇದನ್ನೂ ಓದಿ- ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ( ) ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ. ದೂರವಾಣಿ ಮೂಲಕ ಕೇರಳ ಸಿಎಂ ಪಿಣರಾಯಿ ವಿಜಯನ್ ( ) ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ( ) ಅವರು ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದರು. ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಇದೇ ವೇಳೆ ಅವರು ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...