ನಿರಂತರ ಮಳೆ, ಶೀತಗಾಳಿ ಹಿನ್ನೆಲೆಯಲ್ಲಿ ಜುಲೈ 27 ರಂದು ಶಾಲಾ ಕಾಲೇಜುಗಳಿಗೆ ರಜೆ ಧಾರವಾಡ ಜಿಲ್ಲೆಯಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಶೀತಗಾಳಿ ಬೀಸುತ್ತಿರುವದರಿಂದ ಈಗಾಗಲೇ ಜುಲೈ 25, 26 ರಂದು ಎರಡು ದಿನ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ನೀಡಿದ ರಜೆಯನ್ನು ನಾಳೆ ಜುಲೈ 27, 2024 ರವರೆಗೆ ಮುಂದುವರೆಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶಿಸಿದ್ದಾರೆ. ಧಾರವಾಡ :ಧಾರವಾಡ ಜಿಲ್ಲೆಯಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಶೀತಗಾಳಿ ಬೀಸುತ್ತಿರುವದರಿಂದ ಈಗಾಗಲೇ ಜುಲೈ 25, 26 ರಂದು ಎರಡು ದಿನ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ನೀಡಿದ ರಜೆಯನ್ನು ನಾಳೆ ಜುಲೈ 27, 2024 ರವರೆಗೆ ಮುಂದುವರೆಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶಿಸಿದ್ದಾರೆ. ಇದನ್ನೂ ಓದಿ- ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ಶೀತಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...