ಮೋದಿ - ರಾಹುಲ್‌ ಗಾಂಧಿ.. ಇಬ್ಬರಲ್ಲಿ ಅತೀ ಹೆಚ್ಚಿನ ಮತಗಳ ಅಂತರದಿಂದ ಗೆದ್ದವರು ಯಾರು..? : 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಮೋದಿ ಸಂಸತ್ತನ್ನು ಪ್ರವೇಶಿಸಿದ್ದರು. ಮೋದಿ ಅವರು ಒಂದು ಸ್ಥಾನದಿಂದ ಗೆದ್ದ ಮೂರನೇ ಪ್ರಧಾನಿಯಾಗಿದ್ದಾರೆ. ಈ ಹಿಂದೆ ಈ ದಾಖಲೆಯನ್ನು ದೇಶದ ಮೊದಲ ಪ್ರಧಾನಿಗಳಾದ ಪಂಡಿತ್ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರು ಹೊಂದಿದ್ದರು. 2024 :ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಮೋದಿ ಅವರು ಕಾಂಗ್ರೆಸ್‌ನ ಅಜಯ್ ರೈ ಅವರನ್ನು ಸೋಲಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಪ್ರಧಾನಿ ನಮೋ ಅವರ ಮತಗಳನ್ನು ನೆಟ್ಟಿಗರು ಲೆಕ್ಕ ಹಾಕುತ್ತಿದ್ದಾರೆ. ಹೌದು.. ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಮೋದಿ ಅವರು ಕಾಂಗ್ರೆಸ್‌ನ ಅಜಯ್ ರೈ ಅವರನ್ನು ಸೋಲಿಸಿ ಜಯಭೇರಿ ಬಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 6 ಲಕ್ಷದ 12 ಸಾವಿರದ 970 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ 4 ಲಕ್ಷ 60 ಸಾವಿರದ 457 ಮತಗಳನ್ನು ಪಡೆದಿದ್ದಾರೆ. ಒಟ್ಟು ಮೋದಿ ವಾರಣಾಸಿ ಕ್ಷೇತ್ರದಿಂದ 1 ಲಕ್ಷದ 52 ಸಾವಿರದ 513 ಮತಗಳಿಂದ ಗೆದ್ದಿದ್ದಾರೆ. 2019ಕ್ಕೆ ಹೋಲಿಸಿದರೆ ಪ್ರಧಾನಿ ಮೋದಿಯವರ ಮುನ್ನಡೆ 3 ಲಕ್ಷದಷ್ಟು ಕಡಿಮೆಯಾಗಿದೆ. ಇದನ್ನೂ ಓದಿ: ವಾಸ್ತವವಾಗಿ, 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಮೋದಿ ಸಂಸತ್ತನ್ನು ಪ್ರವೇಶಿಸಿದ್ದರು. ಮೋದಿ ಅವರು ಒಂದು ಸ್ಥಾನದಿಂದ ಗೆದ್ದ ಮೂರನೇ ಪ್ರಧಾನಿಯಾಗಿದ್ದಾರೆ. ಈ ಹಿಂದೆ ಈ ದಾಖಲೆಯನ್ನು ದೇಶದ ಮೊದಲ ಪ್ರಧಾನಿಗಳಾದ ಪಂಡಿತ್ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರು ಹೊಂದಿದ್ದರು. 1.5 ಲಕ್ಷ ಮತಗಳಿಂದ ಯಶಸ್ವಿಯಾಗಿ ಪ್ರಧಾನಿ ಮೋದಿ ಗೆಲುವು ಸಾಧಿಸಿದ್ದಾರೆ. ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಬರೋಬ್ಬರಿ 4 ಲಕ್ಷ ಮತಗಳಿಂದ ಗೆಲುವಿನ ನಗೆ ಬೀರಿದ್ದಾರೆ. ಭಾರತದಲ್ಲಿ ರಾಹುಲ್ ಗಾಂಧಿ ಅವರ ಜನಪ್ರಿಯತೆ ಮೋದಿಯವರಿಗಿಂತ ಹೆಚ್ಚು ಎಂಬುದು ಇದರಿಂದ ಸಾಬೀತಾಗಿದೆ ಅಂತ ನೆಟ್ಟಿಜನ್ಸ್‌ ಮಾತನಾಡಿಕೊಳ್ಳುತ್ತಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...